ಬೆಳಗಾವಿ ಚಳಿಗಾಲ ಅಧಿವೇಶನ: ಪ್ರತಿಭಟನೆಗೆ ರೈತರ ಸಜ್ಜು, ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ

ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳೆಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಲು ರೈತರು ಸಜ್ಜಾಗಿದ್ದು, ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಸಂಸ್ಥಾಪಕ ಅಧ್ಯಕ್ಷ ಪಚ್ಚೆ ನಂಜುಂಡಸ್ವಾಮಿ ಅವರು ಭಾನುವಾರ ಹೇಳಿದರು.

ರೈತರನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಮಂಡ್ಯದಿಂದ 10 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

1980ರ ದಶಕದಲ್ಲಿ ಕಂಪನ ಉಂಟುಮಾಡಿದ್ದ ಕರ್ನಾಟಕ ರಾಜ್ಯ ರೈತ ಸಂಘ ಇತ್ತೀಚಿನ ವರ್ಷಗಳಲ್ಲಿ ತಾತ್ವಿಕ ಭಿನ್ನಾಪ್ರಾಯದಿಂದ ಹಲವು ಬಣಗಳಾಗಿದ್ದು, ಸಂಘಟನೆಯ ಬಲ ಕುಸಿದಿದೆ. ರೈತ ಸಂಘದ ಏಕೀಕರಣದ ಮೂಲಕ ಎಲ್ಲಾ ಬಣಗಳನ್ನು ಒಂದೇ ವೇದಿಕೆಯಲ್ಲಿ ಕರೆತಂದು ಸಂಘಟಿಸಲಾಗುವುದು. ಇದು ಮಹತ್ತರ ಬೆಳವಣಿಗೆಯಾಗಲಿದೆ ಎಂದು ತಿಳಿಸಿದರು.

ಸಂಗ್ರಹ ಚಿತ್ರ
ಬೆಳಗಾವಿ ಜಂಟಿ ಅಧಿವೇಶನ: ಬರಾಕ್ ಒಬಾಮಾಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ಇದೇ ವೇಳೆ ರೈತರ ಏಳಿಗೆಗಾಗಿ ತಮ್ಮ ಜೀವನವನ್ನಲ್ಲೇ ಮುಡಿಪಾಗಿಟ್ಟ ಪ್ರೊ.ಎಂ.ಡಿ.ನಂಜುನಸ್ವಾಮಿ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಅವರನ್ನು ಸ್ಮರಿಸಿದ ಅವರು, ಅವರ ಸಂಘಟನೆಯ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸಲಾಗುವುದು ಎಂದು ಹೇಳಿದರು.

ಡಿ.23ರಂದು ನಡೆಯುವ ಪುಟ್ಟಣ್ಣಯ್ಯನವರ ಜನ್ಮ ದಿನಾಚರಣೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಎಲ್ಲಾ ರೈತ ಸಂಘಟನೆಗಳನ್ನು ಆಹ್ವಾನಿಸಿದ್ದು, ಎಲ್ಲ ರೈತ ಸಂಘಟನೆಗಳು ಒಗ್ಗೂಡಲು ಒಪ್ಪಿಗೆ ನೀಡಿದ್ದಾರೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com