ಈಜುಕೊಳದಲ್ಲಿ ಯುವತಿಯರ ಸಾವು ಪ್ರಕರಣ: ಇಬ್ಬರ ಬಂಧನ

ಮೈಸೂರಿನ ಜೆಎಸ್ ಎಸ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅ್ಯಂಡ್‌ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿನಿಯರಾಗಿದ್ದ ಇವರು, ಕಳೆದ ಶನಿವಾರ ರೆಸಾರ್ಟ್ ನಲ್ಲಿ ರೂಮನ್ನು ಬಾಡಿಗೆಗೆ ಪಡೆದುಕೊಂಡಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್​ನ ಈಜುಕೊಳದಲ್ಲಿ ಈಜಾಡುವಾಗ ನಿಶಿತ ಎಂ.ಡಿ. (21), ಪಾರ್ವತಿ ಎಸ್ (20), ಕೀರ್ತನ ಎನ್(21) ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದರು.

ಮೈಸೂರಿನ ಜೆ ಎಸ್ ಎಸ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಅ್ಯಂಡ್‌ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿನಿಯರಾಗಿದ್ದ ಇವರು, ಕಳೆದ ಶನಿವಾರ ರೆಸಾರ್ಟ್ ನಲ್ಲಿ ರೂಮನ್ನು ಬಾಡಿಗೆಗೆ ಪಡೆದುಕೊಂಡಿದ್ದರು.

ಸಂಗ್ರಹ ಚಿತ್ರ
ಮಂಗಳೂರು: ಉಚ್ಚಿಲ ಬಳಿ ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು

ಭಾನುವಾರ ಬೆಳಿಗ್ಗೆ ವಿಡಿಯೊ ಮಾಡುವುದಕ್ಕಾಗಿ ಮೊಬೈಲ್ ಫೋನ್‌ನಲ್ಲಿ ಕ್ಯಾಮೆರಾ ಆನ್ ಮಾಡಿಟ್ಟು ನೀರಿಗಿಳಿದಿದ್ದರು. ಈ ವೇಳೆ ಆಳವಿರುವ ಕಡೆ ತೆರಳಿರುವ ಯುವತಿಯರು, ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ.

ಘಟನೆ ಬೆನ್ನಲ್ಲೇ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಸಿಬ್ಬಂದಿಯನ್ನು ನಿಯೋಜಿಸದೆ ಮತ್ತು ನೀರಿನ ಆಳದ ಬಗ್ಗೆ ಮಾಹಿತಿ ಫಲಕ ಅಳವಡಿಸದೆ ಸುರಕ್ಷತಾ ಲೋಪ ಎಸಗಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com