ಮಂಗಳೂರು: ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಇಂದು ಕುಟುಂಬ ಸಮೇತ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಸೇರಿದಂತೆ ಕುಟುಂಬಸ್ಥರ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸೂರ್ಯಕುಮಾರ್ ಯಾದವ್ ದಂಪತಿ ಇಲ್ಲಿನ ಶ್ರೀಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಸೇವೆ, ಹಾಗೂ ನಾಗ ಪ್ರತಿಷ್ಠಾಪನ ಪೂಜೆಯನ್ನು ನೆರವೇರಿಸಿದರು.
ಈ ವೇಳೆ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ದಂಪತಿಯನ್ನು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಶಾಲು ಹೊದಿಸಿ ಗೌರವಿಸಿದರು.
ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಹಾಗೂ ದೇವಸ್ಥಾನದ ಸಿಬ್ಬಂದಿ ಜೊತೆಯಲ್ಲಿದ್ದರು.
Advertisement