ಹಂಪಿ ವಿವಿಯಲ್ಲಿ ಆರ್ಥಿಕ ಬಿಕ್ಕಟ್ಟು: SC/ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿಳಂಬ, ಪ್ರತಿಭಟನೆಗೆ ಮುಂದು

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡು ವರ್ಷಗಳ ವಿದ್ಯುತ್ ಬಿಲ್‌ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಆರ್ಥಿಕ ಬಿಕ್ಕಟ್ಟು ಉಲ್ಬಣಗೊಂಡಿದ್ದು, 2023-24ನೇ ಶೈಕ್ಷಣಿಕ ವರ್ಷದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಇದರಿಂದ ಅಸಮಾಧಾನಗೊಂಡಿರುವ ವಿದ್ಯಾರ್ಥಿಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಎರಡು ವರ್ಷಗಳ ವಿದ್ಯುತ್ ಬಿಲ್‌ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು.

ಬಳಿಕ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಶೀಘ್ರವೇ ಬಾಕಿ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಂಪನಿಗೆ ಭರವಸೆ ನೀಡಿತ್ತು. ನಂತರ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲಾಗಿತ್ತು.

ಹಂಪಿ ಕನ್ನಡ ವಿವಿಯ 100ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿಗೂ ಕಳೆದ 8 ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಅವರಿಗೂ ಬಾಕಿ ಇರುವ ವೇತನವನ್ನು ಶೀಘ್ರವೇ ಮಂಜೂರು ಮಾಡುವುದಾಗಿ ಭರವಸೆ ನೀಡಲಾಗಿದೆ.

ಸಂಗ್ರಹ ಚಿತ್ರ
ಕನ್ನಡೇತರರಿಗಾಗಿ ಪ್ರತ್ಯೇಕ ಪಠ್ಯಪುಸ್ತಕ ಮತ್ತು ಪರೀಕ್ಷಾ ವ್ಯವಸ್ಥೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಹಂಪಿ ಕನ್ನಡ ವಿವಿ ವಿನೂತನ ಕಾರ್ಯಕ್ರಮ

ಇದೀಗ 130 ಕ್ಕೂ ಹೆಚ್ಚು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಬಿಡುಗಡೆಯಾಗದಿರುವುದು ವಿವಿಯ ಪ್ರತಿಷ್ಠೆಗೆ ಹೊಡೆತ ಬೀಳುವಂತೆ ಮಾಡಿದೆ.

ಸರಕಾರ ಕೂಡಲೇ ಹಣ ಬಿಡುಗಡೆ ಮಾಡಲು ವಿಫಲವಾದರೆ ನಿರ್ವಹಣೆ ಕಷ್ಟವಾಗಲಿದೆ ಎಂದು ಎಸ್‌ಸಿ ಸಮುದಾಯದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಕಳೆದ ತಿಂಗಳು ಸಚಿವರೊಬ್ಬರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಅವರೊಂದಿಗೆ ಸಮಾಲೋಚನೆಯ ಸಮಯದಲ್ಲಿ ವಿದ್ಯಾರ್ಥಿವೇತನದ ವಿಷಯವನ್ನು ಪ್ರಸ್ತಾಪಿಸಿದ್ದೆವು. ಈ ವೇಳೆ ಶೀಘ್ರದಲ್ಲೇ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದರು.

ನಂತರ ವಿದ್ಯಾರ್ಥಿ ಸಂಘದವರು ಹಲವು ಬಾರಿ ಮನವಿ ಮಾಡಿದರೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಸ್ಕಾಲರ್‌ಶಿಪ್ ನೀಡದಿದ್ದರೆ ಶೀಘ್ರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com