ಪೊಲೀಸರ ಮೇಲೆ ದಾಳಿ ನಡೆಸಿದ್ದರಿಂದ ವಿಕ್ರಮ್ ಗೌಡ ಎನ್‌ಕೌಂಟರ್ ಅನಿವಾರ್ಯವಾಗಿತ್ತು: ಸಚಿವ ಪರಮೇಶ್ವರ್

ಕಳೆದ 20 ವರ್ಷಗಳಿಂದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‌ಕೌಂಟರ್​ಗಳಲ್ಲಿ ವಿಕ್ರಮ್ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಮ್ ಗೌಡ ಎನ್‌ಕೌಂಟರ್ ಆಗಿದೆ.
ಗೃಹ ಸಚಿವ ಪರಮೇಶ್ವರ್
ಗೃಹ ಸಚಿವ ಪರಮೇಶ್ವರ್
Updated on

ಬೆಂಗಳೂರು: ಪೊಲೀಸರ ಮೇಲೆ ದಾಳಿ ವಿಕ್ರಮ್ ಗೌಡ ತಂಡ ದಾಳಿ ನಡೆಸಿದ್ದು, ಹೀಗಾಗಿ ಅನಿವಾರ್ಯವಾಗಿ ಎನ್ಕೌಂಟರ್ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ.

ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಹತ್ಯೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವರು, ಕಳೆದ 20 ವರ್ಷಗಳಿಂದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‌ಕೌಂಟರ್​ಗಳಲ್ಲಿ ವಿಕ್ರಮ್ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಮ್ ಗೌಡ ಎನ್‌ಕೌಂಟರ್ ಆಗಿದೆ. ಆತನ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದರು. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು. ಸೋಮವಾರ ರಾತ್ರಿ ಖಚಿತ ಮಾಹಿತಿ‌ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆಂದು ಹೇಳಿದರು.

ಗೃಹ ಸಚಿವ ಪರಮೇಶ್ವರ್
ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು

ಮೊದಲಿಗೆ ವಿಕ್ರಮ್ ತಂಡ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಜೊತೆಯಲ್ಲಿದ್ದ ಇಬ್ಬರು-ಮೂವರು ಪರಾರಿಯಾಗಿದ್ದಾರೆ. ಇದೀಗ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೇ ಇಂತಹ ಘಟನೆ ಆಗೋದು ಸಹಜ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com