ಬೆಂಗಳೂರು: ರಾಜ್ಯದಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ಪರಿಷ್ಕರಿಸುವ ವಿಚಾರದಲ್ಲಿ ಎದುರಾದ ಜನಾಕ್ರೋಶದ ಪರಿಣಾಮ ಸರ್ಕಾರ ಎಚ್ಚೆತ್ತುಕೊಂಡಿದೆ.
ಸಾರ್ವಜನಿಕರು ತಮ್ಮ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಪರಿಣಾಮ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಿಎಂ ಕಚೇರಿ ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದೆಂದು ಹೇಳಿದೆ. ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಸಿಎಂ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಿಎಂ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.
Advertisement