ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ.
ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಮಾತನಾಡಿದ್ದಾನೆ. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದು, ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ.
ನಾನು ಕನ್ನಡನಾ ಅಥವಾ ಉರ್ದು ಮಾತನಾಡುತ್ತಿದ್ದೇನಾ? ಹಾಗೆ ಯಾರು ಹೇಳಿದ್ದು ಮಾಹಿತಿ ತೆಗೆದುಕೊಳ್ಳಿ. ಆತನನ್ನು ಸುಮ್ಮನೆ ಬಿಡಬೇಡಿ, ಏನು ಅಂತಾ ವಿಚಾರಿಸಿ ಕೇಳಿ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್‌ಗೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ. ಈ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ವಿದ್ಯಾರ್ಥಿಗಾಗಿ ಇಲಾಖೆ ಅಧಿಕಾರಿಗಳು ಶೋಧ ಆರಂಭಿಸಿದ್ದಾರೆ.
Advertisement