ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಗೆಲ್ಲೋದ್ಯಾರು? ಚುನಾವಣೋತ್ತರ ಸಮೀಕ್ಷೆ ಇಲ್ಲಿದೆ!

ಶಿಗ್ಗಾಂವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್‌, ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ ಎನ್ನುವುದು ಗುಪ್ತಚರ ವಿಭಾಗದ ವರದಿಯೂ ಹೇಳುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಗೆ ಅದಾಗಲೇ ಮತದಾನ ನಡೆದಿದ್ದು ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಮಹಾರಾಷ್ಟ್ರ ಚುನಾವಣೆ ಮುಕ್ತಾಯ ಬೆನ್ನಲ್ಲೇ ಇದೀಗ ಮೂರು ಕ್ಷೇತ್ರಗಳ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿವೆ.

P-Marq​ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಪೈಕಿ 2ರಲ್ಲಿ NDA ಹಾಗೂ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಅದರಂತೆ ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆಗಳು ಹೆಚ್ಚಿದ್ದರೆ ಸಂಡೂರು ಕ್ಷೇತ್ರ ಕೈವಶವಾಗುವ ಸಾಧ್ಯತೆಗಳಿವೆ.

ಶಿಗ್ಗಾಂವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್‌, ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ ಎನ್ನುವುದು ಗುಪ್ತಚರ ವಿಭಾಗದ ವರದಿಯೂ ಹೇಳುತ್ತಿದೆ. ಇದನ್ನು ನೋಡಿದರೆ ತೀವ್ರ ಜಿದ್ದಾಜಿದ್ದಿಗೆ ಕಾರವಾಗಿದ್ದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವಿರುದ್ಧ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಸಂಗ್ರಹ ಚಿತ್ರ
Exit polls: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಗೆ ಮತ್ತೆ ಅಧಿಕಾರ; ಜಾರ್ಖಂಡ್ ಸಹ ಎನ್ ಡಿಎ ತೆಕ್ಕೆಗೆ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com