ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ಬಹುದೊಡ್ಡ ಉತ್ತೇಜನ: ಸಚಿವ ಎಂ.ಬಿ ಪಾಟೀಲ್

ಹೂಡಿಕೆದಾರರನ್ನು ಆಕರ್ಷಿಸಲು ಮತ್ತು ಕರ್ನಾಟಕವು ಸೆಮಿಕಂಡಕ್ಟರ್ ಉತ್ಪಾದನೆಗೆ ಗೋ-ಟು ತಾಣವನ್ನಾಗಿಸಲು ರಾಜ್ಯ ಸರ್ಕಾರವು ಎಲ್ಲಾ ಪ್ರೋತ್ಸಾಹವನ್ನು ನೀಡಲು ಸಿದ್ಧವಾಗಿದೆ ಎಂದು ಪಾಟೀಲ್ ಹೇಳಿದರು.
MB Patil
ಎಂ.ಬಿ ಪಾಟೀಲ್
Updated on

ಬೆಂಗಳೂರು: ವಿಶ್ವ ದರ್ಜೆಯ ಸೆಮಿಕಂಡಕ್ಟರ್ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ವೇಗವಾಗಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಕಡೆಗಣಿಸಬಾರದು ಎಂದು ತಿಳಿಸಿದ್ದಾರೆ.

ರಾಜ್ಯದ ಮೂಲಸೌಕರ್ಯ, ಪ್ರತಿಭಾ ಕೌಶಲ್ಯ ಮತ್ತು ಸಂಶೋಧನಾ ಸಾಮರ್ಥ್ಯಗಳು ಅದನ್ನು ಪರಿಪೂರ್ಣ ಸ್ಥಳವನ್ನಾಗಿ ಮಾಡುತ್ತವೆ ಎಂದು ಒತ್ತಿ ಹೇಳಿದರು. ಹೂಡಿಕೆದಾರರನ್ನು ಆಕರ್ಷಿಸಲು ಮತ್ತು ಕರ್ನಾಟಕವು ಸೆಮಿಕಂಡಕ್ಟರ್ ಉತ್ಪಾದನೆಗೆ ಗೋ-ಟು ತಾಣವನ್ನಾಗಿಸಲು ರಾಜ್ಯ ಸರ್ಕಾರವು ಎಲ್ಲಾ ಪ್ರೋತ್ಸಾಹವನ್ನು ನೀಡಲು ಸಿದ್ಧವಾಗಿದೆ ಎಂದು ಪಾಟೀಲ್ ಹೇಳಿದರು. "ಕರ್ನಾಟಕವು ಸೆಮಿಕಂಡಕ್ಟರ್ ಚಿಪ್ ವಿನ್ಯಾಸಗಳ ಉಗಮ ಸ್ಥಳವಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ (ಆರ್ & ಡಿ) ರಾಜ್ಯದ ಸಾಮರ್ಥ್ಯವನ್ನು ಪರಿಚಯಿಸಿ ಉದ್ಯಮದ ಪ್ರಮುಖ ಸ್ಥಳವನ್ನಾಗಿ ಮಾಡಲಾಗುವುದು. ರಾಜ್ಯದಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪಿಸಲು ಆಸಕ್ತಿ ಹೊಂದಿರುವ ಯಾವುದೇ ಕಂಪನಿಯನ್ನು ಮುಕ್ತವಾಗಿ ಉದಾರ ಬೆಂಬಲದೊಂದಿಗೆ ಸ್ವಾಗತಿಸಲಾಗುವುದು ಎಂದು ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಎರಡು ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಭೆಗೂ ಮುನ್ನ ರಾಜ್ಯವನ್ನು ಹೂಡಿಕೆ ಮತ್ತು ಕೈಗಾರಿಕಾ ಬೆಳವಣಿಗೆಯ ಶಕ್ತಿ ಕೇಂದ್ರವಾಗಿಸುವ ಗುರಿಯೊಂದಿಗೆ ಮುಂಬರುವ ತಿಂಗಳುಗಳಲ್ಲಿ ಕರ್ನಾಟಕವು ಸರಣಿ ಕ್ರಮಗಳನ್ನು ಕೈಗೊಳ್ಳಲು ಸಜ್ಜಾಗಿದೆ ಎಂದು ಸಚಿವರು ವಿವರಿಸಿದ್ದಾರೆ. ಸಾಕಷ್ಟು ಪ್ರಚಾರದ ಹೊರತಾಗಿಯೂ ಮೈಸೂರಿನಲ್ಲಿ ಸೆಮಿ ಕಂಡಕ್ಟರ್ ಘಟಕ ಸ್ಥಾಪನೆಗಾಗಿ ವರ್ಷಗಳ ಹಿಂದೆಯೇ ಯೋಜಿಸಲಾಗಿತ್ತು. ಇತರ ರಾಜ್ಯಗಳು ಮುಂದುವರಿಯುತ್ತಿರುವಾಗ ಕರ್ನಾಟಕವು ಇನ್ನು ಮುಂದೆ ಸುಮ್ಮನೆ ಕುಳಿತುಕೊಳ್ಳಲು ಸಿದ್ಧರಿಲ್ಲ ಎಂದು ಪಾಟೀಲ್ ಪ್ರತಿಪಾದಿಸಿದ್ದಾರೆ.

MB Patil
ಬೆಂಗಳೂರು ಟೆಕ್ ಶೃಂಗಸಭೆ 2024: ತಂತ್ರಜ್ಞಾನದ ಪ್ರಗತಿ, ಜಾಗತಿಕ ಸಹಯೋಗಕ್ಕೆ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ- ಸಿಎಂ ಸಿದ್ದರಾಮಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com