ಬೆಳಗಾವಿ: ಡಿಸೆಂಬರ್ 9ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಸರ್ಕಾರ ಅಧಿಕೃತವಾಗಿ ಪ್ರಕಟಿಸಿದ್ದು, ಇತ್ತೀಚೆಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವಿಧಾನಸೌಧ ಮತ್ತು ಮುಂಬರುವ ಅಧಿವೇಶನದ ಪೂರ್ವಭಾವಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಮುಂಬರುವ ಅಧಿವೇಶನದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಲವಾರು ವಿವಾದಾತ್ಮಕ ವಿಷಯಗಳನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ನಿರೀಕ್ಷೆಯಿದೆ, ಸರ್ಕಾರದ ವಿವಿಧ ಅಭಿವೃದ್ಧಿ ಉಪಕ್ರಮಗಳಿಗೆ ಮೀಸಲಾದ ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ ಎಂಬ ಆರೋಪವಿದೆ. ಮುಡಾ ನಿವೇಶನ ಹಂಚಿಕೆ ಸಮಸ್ಯೆ ಇದ್ದು, ಅದನ್ನು ಮುಖ್ಯವಾಗಿ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸಬಹುದು ಎಂದು ಮೂಲಗಳು ತಿಳಿಸಿವೆ.
ನಿನ್ನೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಚಳಿಗಾಲದ ಅಧಿವೇಶನವನ್ನು ಪರಿಣಾಮಕಾರಿಯಾಗಿ ನಡೆಸಲು ಜಿಲ್ಲಾಡಳಿತ ಮತ್ತು ಬೆಳಗಾವಿ ಪೊಲೀಸರು ಸಕಲ ವ್ಯವಸ್ಥೆ ಮಾಡಿದ್ದಾರೆ ಎಂದರು. ಸಾರಿಗೆ ವ್ಯವಸ್ಥೆ, ವಸತಿ, ಆಹಾರ, ಸುವರ್ಣ ವಿಧಾನಸೌಧದ ನಿರ್ವಹಣೆ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ವ್ಯವಸ್ಥೆ ಮಾಡಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಅಧಿವೇಶನವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸರಕಾರಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದರು.
ಬೆಳಗಾವಿ ಮತ್ತು ಸುತ್ತಮುತ್ತಲಿನ ಹೆಚ್ಚಿನ ಹೋಟೆಲ್‌ಗಳು, ರೆಸಾರ್ಟ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಅಧಿವೇಶನಕ್ಕೆ ಆಗಮಿಸುವ ಅತಿಥಿಗಳಿಗೆ ವಸತಿ ಕಲ್ಪಿಸಲು 10 ದಿನಗಳವರೆಗೆ ಕಾಯ್ದಿರಿಸಲಾಗುತ್ತದೆ.
1924ರ ಅಧಿವೇಶನದ ಶತಮಾನೋತ್ಸವ
1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರು ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಸಮಗ್ರ ಅಧಿವೇಶನದ ಶತಮಾನೋತ್ಸವ ಆಚರಣೆ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಲ್ಲಿನ ಟಿಳಕವಾಡಿಯಲ್ಲಿ 100 ವರ್ಷಗಳ ಹಿಂದೆ ಕಾಂಗ್ರೆಸ್‌ನ ಮಹಾಧಿವೇಶನ ನಡೆದ ಜಾಗದಲ್ಲಿ ನಿರ್ಮಿಸಿರುವ ವೀರಸೌಧ ಸ್ಮಾರಕವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ.ಕೈಗೊಂಡಿದೆ.
ಮುಂದಿನ ವರ್ಷ ಅಕ್ಟೋಬರ್ 2 ರಂದು ಕೊನೆಗೊಳ್ಳುವ ವರ್ಷವಿಡೀ ನಡೆಯುವ ಆಚರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತವು ವೀರಸೌಧ ಮತ್ತು ಬೆಳಗಾವಿಯ ಇತರ ಸ್ಥಳಗಳಲ್ಲಿ ಸರಣಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಹೇಳಿದರು.
ಬೆಳಗಾವಿಯ ಕಣಬರ್ಗಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಗಂಗಾಧರ ರಾವ್ ದೇಶಪಾಂಡೆ ಅವರ ಸ್ಮಾರಕವನ್ನೂ ಅಭಿವೃದ್ಧಿಪಡಿಸಲಾಗುವುದು. ಬೆಳಗಾವಿಯವರಾದ ಗಂಗಾಧರ ದೇಶಪಾಂಡೆ ಅವರು 1924 ರಲ್ಲಿ ಕಾಂಗ್ರೆಸ್ ಸಮಗ್ರ ಅಧಿವೇಶನ ನಡೆಸಲು ಮುಂದಾಳತ್ವ ವಹಿಸಿದ್ದರು.
Advertisement