ಭೀಕರ ಅಪಘಾತ: ರಿವರ್ಸ್ ಬರುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ; 7 ಮಂದಿಗೆ ಗಂಭೀರ ಗಾಯ, Video Viral

ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.
Speeding Truck hits Innova car which coming in reverse
ಕುಂದಾಪುರದಲ್ಲಿ ಭೀಕರ ರಸ್ತೆ ಅಪಘಾತ
Updated on

ಉಡುಪಿ: ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದ್ದು, ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿ ಡಿಕ್ಕಿಹೊಡೆದಿದೆ.

ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರ ಪೈಕಿ ಏಳೂ ಜನ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Speeding Truck hits Innova car which coming in reverse
ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ; ಅಧಿಕಾರಿಗಳೇ ಶಾಕ್!

ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ಏಳು ಜನ ಪ್ರವಾಸಕ್ಕೆಂದು ಬಂದಿದ್ದರು. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಂಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳುತ್ತಿದ್ದರೆನ್ನಲಾಗಿದೆ.

ಇದೇ ಸಂದರ್ಭ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಸುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆಯ ಹೊನ್ನಾವರ ಮೂಲದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಅಷ್ಟೂ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com