ಬೆಂಗಳೂರು: ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.
ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.
ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ,
ಎಸ್. ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಜಗಳ ಶುರುವಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿತ್ತು, ಮೂವರಿಗೆ ಚಾಕುವಿನಿಂದ ಇರಿತವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Advertisement