ವಾಲ್ಮೀಕಿ ನಿಗಮ ಹಗರಣ: ತನಿಖೆ ವಿವರ ಸಲ್ಲಿಸಿ; CBIಗೆ ಹೈಕೋರ್ಟ್ ಸೂಚನೆ

ಹಗರಣದ ತ್ವರಿತ ಸಿಬಿಐ ತನಿಖೆ‌ಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
Karnataka Highcourt
ಕರ್ನಾಟಕ ಹೈಕೋರ್ಟ್
Updated on

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿರುವ ಎಫ್‌ಐಆರ್‌ ಅನುಸಾರ ಈವರೆಗೂ ನಡೆಸಲಾಗಿರುವ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಿ ಎಂದು ಹೈಕೋರ್ಟ್‌, ಸಿಬಿಐಗೆ ಸೂಚನೆ ನೀಡಿದೆ.

ಹಗರಣದ ತ್ವರಿತ ಸಿಬಿಐ ತನಿಖೆ‌ಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ವಿಚಾರಣೆ ನಡೆಸಿದರು.

Karnataka Highcourt
ವಾಲ್ಮೀಕಿ ನಿಗಮ ಹಗರಣ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಸಿಬಿಐ ತನಿಖೆಯನ್ನು ಹೈಕೋರ್ಟ್‌ ನಿಗಾದಲ್ಲಿಯೇ ನಡೆಸಬೇಕು. ಪ್ರತಿ 15 ದಿನಗಳಿಗೊಮ್ಮೆ ಸಿಬಿಐ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಮತ್ತು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com