ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಹೇಳಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯ ಪಟ್ಟಿದೆ.
ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ಶಿಗ್ಗಾಂವಿಯಲ್ಲೂ ಯಾಸಿರ್ ಖಾನ್ ಪಠಾಣ್ ಗೆಲುವಿನ ನಗೆ ಬೀರಿದ್ದಾರೆ.
ಫಲಿತಾಂಶಕ್ಕೂ ಮುನ್ನ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಅದರಂತೆ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
Advertisement