Karnataka Bypoll Results 2024 LIVE Updates: ಮೂರು ಕ್ಷೇತ್ರಗಳೂ ಕಾಂಗ್ರೆಸ್ ಪಾಲು; ಚನ್ನಪಟ್ಟಣದಲ್ಲಿ ಸೈನಿಕನಿಗೆ ಗೆಲುವು; ನಿಖಿಲ್ ಗೆ ಹ್ಯಾಟ್ರಿಕ್ ಸೋಲು

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

3 ಉಪ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ

ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮತದಾನ ನಡೆದಿದ್ದು, ಮತ ಎಣಿಕೆ ಕೆಲವೇ ಕ್ಷಣದಲ್ಲಿ ಆರಂಭವಾಗಲಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.

ಚನ್ನಪಟ್ಟಣ: 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಗೆ ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಕಾಲೇಜಿನ 3 ಹಾಲ್​ನಲ್ಲಿ ಒಟ್ಟು 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ.

ನಿಷೇಧಾಜ್ಞೆ ಜಾರಿ

ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ವೇಳೆ ಬಹಿರಂಗ ಸಭೆ, ಸಾರ್ವಜನಿಕ ಭಾಷಣ, ಸಂಭ್ರಮಾಚರಣೆ ಮಾಡದಂತೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಮತಎಣಿಕೆ: ಚುನಾವಣಾ ಅಧಿಕಾರಿಗಳಿಂದ ಸ್ಟ್ರಾಂಗ್ ರೂಂ ಓಪನ್

ಮತಎಣಿಕೆ ಆರಂಭ

ರಾಜ್ಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.

ಚನ್ನಪಟ್ಟಣ-ಶಿಗ್ಗಾವಿಯಲ್ಲಿ NDA ಮುನ್ನಡೆ

ಚನ್ನಪಟ್ಟಣ-ಶಿಗ್ಗಾವಿಯಲ್ಲಿ ಎನ್'ಡಿಎ ಅಭ್ಯರ್ಥಿಗಳಾದ ಭರತ್ ಬೊಮ್ಮಾಯಿ ಹಾಗೂ ನಿಖಿಲ್ ಕುಮಾರಸ್ವಾಮಿಯವರು ಮುನ್ನಡೆ ಸಾಧಿಸಿದ್ದು, ಸಂಡೂರಿನಲ್ಲಿ ಅನ್ನಪೂರ್ಣ ತೂಕಾರಾಂ ಅವರು ಮುನ್ನಡೆ ಸಾಧಿಸಿದ್ದಾರೆ.

ಗೆಲುವಿನ ಭರವಸೆಯಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

3 ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್​ ನಡುವೆ ತೀವ್ರ ಪೈಪೋಟಿ

3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಮುನ್ನಡೆ ಸಾಧಿಸಿದ್ದಾರೆ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್​ ಬೊಮ್ಮಾಯಿ ಹಾಗೂ ಚನ್ನಪಟ್ಟಣದಲ್ಲಿ ಜೆಡಿಎಸ್​ ಅಭ್ಯರ್ಥಿ ನಿಖಲ್​ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.

ಶಿಗ್ಗಾಂವಿ: 7ನೇ ಸುತ್ತು ಮುಕ್ತಾಯ

ಬಿಜೆಪಿಯ ಭರತ್ ಬೊಮ್ಮಾಯಿ: 38,607 ಮತಗಳನ್ನು ಗಳಿಸಿದ್ದರೆ, ಕಾಂಗ್ರೆಸ್‌ನ ಯಾಸೀರ ಅಹಮದ್ ಖಾನ್ ಪಠಾಣ 37,609 ಮತಗಳನ್ನು ಪಡೆದಿದ್ದಾರೆ. ಬಿಜೆಪಿಗೆ 998 ಮತಗಳ ಮುನ್ನಡೆ ಲಭಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್‌ಗೆ ಹಿನ್ನಡೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯ 6ನೇ ಸುತ್ತಿನ ಬಳಿಕ ನಿಖಿಲ್ ಕುಮಾರಸ್ವಾಮಿಗೆ 30,675 ಮತ ಹಾಗೂ ಯೋಗೇಶ್ವರ್‌ಗೆ 29,891 ಮತಗಳು ಸಿಕ್ಕಿವೆ. ಯೋಗೇಶ್ವರ್‌ಗೆ 783 ಮತಗಳ ಹಿನ್ನಡೆ ಎದುರಾಗಿದೆ.

ಮತ ಎಣಿಕೆ ಕೇಂದ್ರದ ಸುತ್ತ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಜನತೆ

ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಆರಂಭಿಕ ಮುನ್ನಡೆ ಪಡೆದಿದ್ದು, ಪಕ್ಷದ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಸುತ್ತ ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ಹಾವು-ಏಣಿ ಆಟ

ಚನ್ನಪಟ್ಟಣದಲ್ಲಿ 7ನೇ ಸುತ್ತಿನ ಮತ ಎಣಿಕೆ ಪ್ರಗತಿಯಲ್ಲಿದ್ದು, ಏಳನೇ ಸುತ್ತಿನಲ್ಲಿ ಸಿಪಿ ಯೋಗೇಶ್ವರ್​ 3663 ಸಾವಿರ ಮತಗಳ ಅಂತರದಿಂದ ಭಾರಿ ಮುನ್ನಡೆ ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಸಿಪಿ ಯೋಗೆಶ್ವರ್ ಮುನ್ನಡೆ ಸಾಧಿಸಿದ್ದಾರೆ.

18 ಸಾವಿರ ಮತಗಳಿಂದ ಯೋಗೇಶ್ವರ್ ಭರ್ಜರಿ ಮುನ್ನಡೆ

ಚನ್ನಪಟ್ಟಣದಲ್ಲಿ 9ನೇ ಸುತ್ತಿನ ಮತಎಣಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರು 18,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿಗೆ ಹಿನ್ನಡೆ

ಶಿಗ್ಗಾಂವಿಯಲ್ಲಿ 9ನೇ ಸುತ್ತಿನ ಮತಎಣಿಕ ಕಾರ್ಯ ಪ್ರಗತಿಯಲ್ಲಿದ್ದು, 9ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಮುನ್ನಡೆ ಸಾಧಿಸಿದ್ದಾರೆ.

ಸಂಡೂರಿನಲ್ಲಿ 10ನೇಸುತ್ತಿನಲ್ಲೂ ಕಾಂಗ್ರೆಸ್'ಗೆ ಮುನ್ನಡೆ

ಸಂಡೂರಿನಲ್ಲಿ 3,488 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತೂಕಾರಾಂ ಅವರು ಮುನ್ನಡೆ ಸಾಧಿಸಿದ್ದಾರೆ.

3 ಕ್ಷೇತ್ರಗಳಲ್ಲೂ ಕಾಂಗ್ರೆಸ್'ಗೆ ಮುನ್ನಡೆ

3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಸಂಡೂರಿನಲ್ಲಿ ಅನ್ನಪೂರ್ಣ ಇ ತುಕಾರಾಂ ಅವರು 6,973, ಚನ್ನಪಟ್ಟಣದಲ್ಲಿ ಸಿಪಿ.ಯೋಗೇಶ್ವರ್ 21,966 ಹಾಗೂ ಶಿಗ್ಗಾಂವಿಯಲ್ಲಿ ಯಾಸಿರ್ ಪಠಾಣ್ ಅವರು 355 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಶಿಗ್ಗಾವಿ: ಕಾಂಗ್ರೆಸ್‌ಗೆ ಭಾರಿ‌ ಮುನ್ನಡೆ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ‌ಮತ ಎಣಿಕೆಯ 11ನೇ ಸುತ್ತು ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ‌ ಅಹಮದ್ ಖಾನ್ ಪಠಾಣ್ ಭಾರೀ ಮುನ್ನಡೆ ಸಾಧಿಸಿದ್ದಾರೆ.

ಭರತ್ ಬೊಮ್ಮಾಯಿ ಹಾಗೂ ಯಾಸಿರ್ ಅಹ್ಮದ್ ಖಾನ್ ಪಠಾಣ್
ಭರತ್ ಬೊಮ್ಮಾಯಿ ಹಾಗೂ ಯಾಸಿರ್ ಅಹ್ಮದ್ ಖಾನ್ ಪಠಾಣ್

ಕಾಂಗ್ರೆಸ್‌ 12,793 ಮತಗಳ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾ್ 68,078 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ: 55,285 ಮತಗಳನ್ನು ಪಡೆದಿದ್ದಾರೆ.

ಸಂಡೂರಿನಲ್ಲಿ ಕಾಂಗ್ರೆಸ್ ಮೇಲುಗೈ

ಸಂಡೂರಿನಲ್ಲಿ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ 8,881 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಅನ್ನಪೂರ್ಣ
ಅನ್ನಪೂರ್ಣ

ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು 83,368 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಬಂಗಾರ ಹನುಮಂತ ಅವರು 74,487 ಮತಗಳನ್ನು ಪಡೆದಿದ್ದಾರೆ.

ಚನ್ನಪಟ್ಟಣದಲ್ಲಿ ಯೋಗೇಶ್ವರ್ ಮುನ್ನಡೆ

ಚನ್ನಪಟ್ಟಣದಲ್ಲಿ 12ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಮುನ್ನಡೆಯ ಅಂತರ 22,063ಕ್ಕೆ ಏರಿಕೆಯಾಗಿದೆ.

ನಿಖಿಲ್ ಹಾಗೂ ಯೋಗೇಶ್ವರ್
ನಿಖಿಲ್ ಹಾಗೂ ಯೋಗೇಶ್ವರ್

ಯೋಗೇಶ್ವರ್ 73,143 ಮತಗಳನ್ನು ಪಡೆದಿದ್ದರೆ, ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ 51,080 ಮತ ಗಳಿಸಿದ್ದಾರೆ.

ಸಂಡೂರು, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಜಯಭೇರಿ

Summary

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಹಾಗೂ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ‌ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣ: 24 ಸಾವಿರ ಮತಗಳ ಅಂತರದಿಂದ ಯೋಗೇಶ್ವರ್ ಮುನ್ನಡೆ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಅವರು 24,831 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರು ಹಿನ್ನಡೆ ಅನುಭವಿಸಿದ್ದಾರೆ.

ಚನ್ನಪಟ್ಟಣದಲ್ಲಿ ಯೋಗೇಶ್ವರ್ ಜಯಭೇರಿ

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಅವರು ಗೆಲುವಿನ ನಗೆ ಬೀರಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು ಮತದಾರರು ಯೋಗೇಶ್ವರ್‌ ಕೈಹಿಡಿದಿದ್ದಾರೆ.

ಮೊದಲ 6 ಸುತ್ತಿನಲ್ಲಿ ನಿಖಿಲ್‌ ಮುನ್ನಡೆಯಲ್ಲಿದ್ದರು. ಆದರೆ, ಇವಿಎಂ ಓಪನ್‌ ಆಗುತ್ತಿದ್ದಂತೆ ಯೋಗೇಶ್ವರ್‌ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್‌ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.

ನಿಖಿಲ್​ ಕುಮಾರಸ್ವಾಮಿಗೆ ಸೋಲು

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ. ಈ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.

ಶಿಗ್ಗಾಂವಿ , ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು

Summary

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು ಸಾಧಿಸಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದರೆ, ಶಿಗ್ಗಾಂವಿ ಬಿಜೆಪಿ​ ಅಭ್ಯರ್ಥಿ ಭರತ್​ ಬೊಮ್ಮಾಯಿಗೆ 86,960 ಮತಗಳು ದೊರೆತಿವೆ.

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು

Summary

ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ.

ಈ ಮೂಲಕ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. ಅನ್ನಪೂರ್ಣ ಅವರು 9,105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹಣ ಹಂಚಿ ಗೆದ್ದಿದ್ದಾರೆ: ಸಂಡೂರು ಬಿಜೆಪಿ ಅಭ್ಯರ್ಥಿ ಆರೋಪ

ಸಂಡೂರಿನಲ್ಲಿ ಹಣ ಬಲ ಕೆಲಸ ಮಾಡಿದೆ. ಸೋಲಿನ‌‌‌ ಹೊಣೆ ನಾನೇ ಹೊರುವೆ. ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವೆ ಎಂದು ಬಿಜೆಪಿ‌ ಅಭ್ಯರ್ಥಿ ಬಂಗಾರು ಹನುಮಂತ ಅವರು ಹೇಳಿದ್ದಾರೆ.

ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದೇ ಸೋಲಿಗೆ ಕಾರಣ: BJP

Summary

ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣವಾಗಿದ್ದು, ನಾವು ಒಂದು ವರ್ಷ, ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಸೋಲು ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕೊನೆಯ ಹಂತದಲ್ಲಿ ಚುನಾವಣೆ ಘೋಷಣೆ ಆದ ಮೇಲೆ ಅಭ್ಯರ್ಥಿ ತಯಾರು ಮಾಡಿದ್ದು ಕೂಡಾ ಹಿನ್ನೆಡೆ ಆಗಿದೆ. ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ. ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್​ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಗೆಲುವು ಆಗುತ್ತಿತ್ತು ಎಂದು ಹೇಳಿದರು.

ಚುನಾವಣೆಗೆ ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದೆ: ಭರತ್ ಬೊಮ್ಮಾಯಿ

Summary

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಚುನಾವಣೆಗಾಗಿ ಹಣದ ಹೊಳೆಯನ್ನೇ ಹರಿಸಿದೆ ಎಂದು ಶಿಗ್ಗಾಂವಿ ಪರಾಜಿತ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಇಡೀ ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ. ಹಾಗಾಗಿ ಕಾಂಗ್ರೆಸ್ ಗೆದ್ದಿದೆ. ನಾನು ಯಾವತ್ತಿದ್ದರೂ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರಿಗೆ ಒಳಿತು ಆಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕ್ಷೇತ್ರದ ಜನರ ಜೊತೆಗೆ ಎಂದೆಂದಿಗೂ ಇರುತ್ತೇನೆ. ನಮ್ಮ ಸೋಲಿಗೆ ಕಾರಣ ಏನೆಂಬುವುದನ್ನು ಪಕ್ಷದ ಹಿರಿಯರು ಹಾಗೂ ಯುವಕರೆಲ್ಲ ಸೇರಿ ಅವಲೋಕನ ಮಾಡುತ್ತೇವೆ. ಈ ಬಗ್ಗೆ ಎಲ್ಲರೂ ಒಟ್ಟು ಸೇರಿ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು: ಉಪಚುನಾವಣೆ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

Summary

ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದೆ. ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕ ಉಪಚುನಾವಣೆ ಫಲಿತಾಂಶ: ಆಡಳಿತಾರೂಢ ಕಾಂಗ್ರೆಸ್‌ ಕ್ಲೀನ್ ಸ್ವೀಪ್

ಉಪ ಚುನಾವಣೆ: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ಗೆಲುವು

ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಿದೆ: ಗೆಲುವಿನ ಬಳಿಕ ಸಿಪಿ ಯೋಗೇಶ್ವರ್

Dk shivakumar: ಬೈ ಎಲೆಕ್ಷನ್ ಫಲಿತಾಂಶ- 2028 ರ ವಿಧಾನಸಭೆ ಚುನಾವಣೆಯ ಗೆಲುವಿಗೆ ಮುನ್ನುಡಿ

ನಿಖಿಲ್ ಅರ್ಜುನನ ಪಾತ್ರ ಮಾಡ್ತಾರಂತ ಅಂದ್ಕೊಂಡಿದ್ವಿ, ಆದರೆ ಜನ ಅಭಿಮನ್ಯು ಆಗಿಸಿದ್ದಾರೆ: ಆರ್. ಅಶೋಕ್

ಶಿಗ್ಗಾಂವಿ ಫಲಿತಾಂಶ: ಮಾಜಿ ಸಿಎಂ ಬೊಮ್ಮಾಯಿ ಪುತ್ರನ ವಿರುದ್ಧ ಕಾಂಗ್ರೆಸ್ ನ ಪಠಾಣ್ ಗೆಲುವು