ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೀವಾ (35) ಮೃತ ಮಹಿಳೆ. ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿಟ್ಟು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕೀಲಿ ವೃತ್ತಿ ನಡೆಸುತ್ತಿದ್ದ ಆರೋಪಿ, ನಿಗಮದ ಫಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ಪೂರೈಕೆ ಮಾಡಿದ್ದರು. ಹಾಗಾಗಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ಕಳುಹಿಸಿದ್ದರು. ಗುರುವಾರ ವಿಚಾರಣೆಗೆ ಹಾಜರಾಗಿ ಮನೆಗೆ ವಾಪಸ್ ಆಗಿದ್ದರು. ಶುಕ್ರವಾರ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆ ನೆಪದಲ್ ಸಿಐಡಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪದ್ಮನಾಭ ನಗರದ ಜೀವಾ ಅವರ ನಿವಾಸದಲ್ಲಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಬನಶಂಕರಿ ಠಾಣೆ ಪೊಲೀಸರು ತಿಳಿಸಿದ್ದಾರೆ.
Advertisement