BJP-JDS ಅಪಪ್ರಚಾರಗಳನ್ನು ಜನ ತಿರಸ್ಕರಿಸಿದ್ದಾರೆ: ಸಚಿವ ಎಚ್.ಸಿ ಮಹದೇವಪ್ಪ

ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ. ವಿರೋಧ ಪಕ್ಷಗಳು ಮುಡಾ, ವಾಲ್ಮೀಕಿ ಹಗರಣ ಮತ್ತು ವಕ್ಫ್ ವಿವಾದ ಇಟ್ಟುಕೊಂಡು ಜನರ ಬಳಿಗೆ ಹೋದವು. ಆದರೆ ಜನರು ಅವರನ್ನು ತಿರಸ್ಕರಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಆಡಳಿತಾರೂಢ ಸರ್ಕಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಬಿಜೆಪಿ-ಜೆಡಿಎಸ್ ಯತ್ನಕ್ಕೆ ಜನ ತಕ್ಕ ಉತ್ತರ ನೀಡಿದ್ದಾರೆ ಎಂದು ಜಿಲ್ಲಾ ಸಚಿವ ಎಚ್.ಸಿ.ಮಹದೇವಪ್ಪ ಅವರು ಶನಿವಾರ ಹೇಳಿದರು.

ಉಪಚುನಾವಣೆ ನಡೆದ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕಿರುವ ಜನರ ಕಲ್ಯಾಣಕ್ಕಾಗಿ ಬದ್ಧತೆಗಾಗಿ ಜನರು ಆಶೀರ್ವದಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಜನಪರ ರಾಜಕಾರಣಿ ಎಂದು ಶ್ಲಾಘಿಸಿದ ಅವರು, ಮುಡಾ ಹಗರಣ ಸೃಷ್ಟಿಸಿ ಮುಖ್ಯಮಂತ್ರಿಯನ್ನು ಮೂಲೆಗುಂಪು ಮಾಡಲು ವಿರೋಧ ಪಕ್ಷಗಳು ಯತ್ನಿಸಿದ್ದವು. ಆದರೆ, ಜನರು ಅವರನ್ನು ನಂಬಲಿಲ್ಲ ಎಂದು ತಿಳಿಸಿದರು.

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮಾತನಾಡಿ, ವಿರೋಧ ಪಕ್ಷಗಳ ಸುಳ್ಳಿನ ಕಂತೆಯನ್ನು ಜನ ತಿರಸ್ಕರಿಸಿದ್ದಾರೆಂದು ಹೇಳಿದರು.

ಸಂಗ್ರಹ ಚಿತ್ರ
ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು: ಉಪಚುನಾವಣೆ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ತಮ್ಮ ಕುಟುಂಬ ಸದಸ್ಯರ ಹಿತಾಸಕ್ತಿಯಲ್ಲಿ ಮಾತ್ರ ಆಸಕ್ತಿ ಹೊಂದಿದ್ದಾರೆ ಎಂಬುದು ಜನರಿಗೆ ತಿಳಿದು ಬಂದಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ತನ್ವೀರ್ ಸೇಠ್ ಮಾತನಾಡಿ, ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ. ವಿರೋಧ ಪಕ್ಷಗಳು ಮುಡಾ, ವಾಲ್ಮೀಕಿ ಹಗರಣ ಮತ್ತು ವಕ್ಫ್ ವಿವಾದ ಇಟ್ಟುಕೊಂಡು ಜನರ ಬಳಿಗೆ ಹೋದವು. ಆದರೆ ಜನರು ಅವರನ್ನು ತಿರಸ್ಕರಿಸಿದರು ಎಂದು ಹೇಳಿದರು.

ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕೋಮುವಾದಿ ಯೋಜನೆಗಳನ್ನು ಜನರು ಸೋಲಿಸಿದ್ದಾರೆಂದು ಹೇಳಿದರು.

ಸರ್ಕಾರವನ್ನು ಅಸ್ಥಿರಗೊಳಿಸಲು ವಿರೋಧ ಪಕ್ಷಗಳು ಷಡ್ಯಂತ್ರ ನಡೆಸುತ್ತಿದ್ದು, ಈ ಗೆಲುವು ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಹಾಗೂ ನೈತಿಕ ಶಕ್ತಿಯನ್ನು ಹೆಚ್ಚಿಸಿದೆ ಎಂದು ತಿಳಿಸಿದರು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com