ಡಿಸೆಂಬರ್ 9 ರಿಂದ ಚಳಿಗಾಲ ಅಧಿವೇಶನ: ಜಿಲ್ಲಾಧಿಕಾರಿಯಿಂದ ಪೂರ್ವಸಿದ್ಧತಾ ಸಭೆ

ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದೆ. ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.
ಬೆಳಗಾವಿ ಅಧಿವೇಶನ
ಬೆಳಗಾವಿ ಅಧಿವೇಶನ
Updated on

ಬೆಳಗಾವಿ: ಪ್ರಸಕ್ತ ಸಾಲಿನ ವಿಧಾನಮಂಡಲ ಚಳಿಗಾಲ ಅಧಿವೇಶನ ಡಿ.9 ರಿಂದ ನಡೆಯಲಿದ್ದು, ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟ, ಉಪಾಹಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ರೋಷನ್ ಮಾತನಾಡಿದರು.

ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಕಡಿಮೆ ಸಮಯಾವಕಾಶವಿದೆ. ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು, ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಾಗಲೇ ವಸತಿ, ಆಹಾರ, ಸಾರಿಗೆ, ಆರೋಗ್ಯ, ದೂರು ನಿರ್ವಹಣೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಸಮಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪದೋಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಬೆಳಗಾವಿ ಅಧಿವೇಶನ
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ: ಸಮಿತಿ ರಚನೆ

ಸಚಿವರು, ಹಿರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು. ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾದ ಹೊಟೇಲ್‌ಗಳನ್ನು ಪರಿಶೀಲಿಸಿ, ಅವುಗಳ ಮಾಲೀಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಬೇಕು. ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಅಗತ್ಯ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸಿದ ಎಲ್ಲರ ಆರೋಗ್ಯ ರಕ್ಷಣೆ ಹಾಗೂ ತುರ್ತು ವೈದ್ಯಕೀಯ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ಎಲ್ಲ ವಸತಿ‌ ಸ್ಥಳಗಳಲ್ಲಿ ಮತ್ತು ಸುವರ್ಣ ವಿಧಾನಸೌಧದಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ಮತ್ತು ಅಂಬ್ಯುಲೆನ್ಸ್ ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com