ಮೈಸೂರು: ‘ಫೋನ್‌ಪೇ’ ಮೂಲಕ ಲಂಚ ಪಡೆದ ಆರೋಪದ ಮೇಲೆ ಮೂವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಎಚ್.ಡಿ.ಕೋಟೆ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ಕಂದಾಯ ನಿರೀಕ್ಷಕ ಗೋವಿಂದರಾಜು, ಎನ್.ಬೆಳತ್ತೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆಯ ಬಿ.ವಿ.ಮಮತಾ ಕುಮಾರಿ ಅವರ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಗುಂಡತ್ತೂರು ಗ್ರಾಮದ ಸರ್ವೆ ನಂ.10ರ 5 ಎಕರೆ 1 ಗುಂಟೆ ಭೂಮಿಯನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅಧಿಕಾರಿಗಳು ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಆಸ್ತಿ ಹಂಚಿಕೆ ಮಾಡಿ ಮಾರಾಟ ಮಾಡಲು ಹಾಗೂ ಹಿಂದಿನಂತೆ ದಾಖಲೆಗಳನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರವಾಗಿ ಮೊದಲ ಹಂತದಲ್ಲಿ 5 ಸಾವಿರ ಫೋನ್ ಪೇ ಮೂಲಕ ಲಂಚ ಪಡೆದು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ
Advertisement