ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು: ನಿರಾಸೆಗೊಂಡ ಚಿಣ್ಣರು

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬದಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಜರಾಗಿದ್ದರು. ಈ ವೇಳೆ ವಿದ್ಯಾರ್ಥಿಗಳ ಸಲಹೆ ಹಾಗೂ ಮನವಿಯನ್ನು ಆಲಿಸಿ ಸ್ಪಂದನೆ ನೀಡಿದರು.
ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮ
ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮ
Updated on

ಬೆಂಗಳೂರು: ಕರ್ನಾಟಕ ಮಕ್ಕಳ ಹಕ್ಕುಗಳ ವೀಕ್ಷಣಾಲಯ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಸಂಸತ್ ಸಮಾಲೋಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರು ಹಾಜರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯದ 25 ಜಿಲ್ಲೆಗಳ 62 ವಿದ್ಯಾರ್ಥಿಗಳು ನಿರಾಸೆಗೊಂಡರು.

ಗೈರು ಹಾಜರು ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕಾರ್ಯಕ್ರಮದ ಬಗ್ಗೆ ಆಯೋಜಕರು ನನಗೆ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಈ ನಡುುವೆ ಸಮಾಲೋಚನೆ ವೇಳೆ ಮಕ್ಕಳು, ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದರು.

ಗ್ರಾಮೀಣ ಮತ್ತು ಗಡಿಭಾಗದ ಶಾಲೆಗಳಲ್ಲಿ ವಿಶೇಷವಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಕೊರತೆ ವಿಚಾರ ಪ್ರಸ್ತಾಪಿಸಿ ಹಲವರ ಗಮನಸೆಳೆದರು, ಇದು ಶೈಕ್ಷಣಿಕ ಹಿನ್ನಡೆಗೆ ಕಾರಣವಾಗಿದ್ದು, ಈ ಕೊರತೆಗಳನ್ನು ನೀಗಿಸಲು ಕೂಡಲೇ ನೇಮಕಾತಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮ
ಮಕ್ಕಳ ಹಕ್ಕು ಸಂಸತ್ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳ ಗೈರು, ಕಾದು ಸುಸ್ತಾಗಿ ವಾಪಸ್ ಆದ ಪುಟಾಣಿಗಳು

ಅಪೌಷ್ಟಿಕತೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಯರಿಗೆ ಕಿಶೋರಿ ಯೋಜನೆಯಿಂದ ಅನುಕೂಲವಾಗಿದ್ದು, ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಮತ್ತು ಆರೋಗ್ಯವನ್ನು ಸುಧಾರಿಸುವಲ್ಲಿ ಸಕಾರಾತ್ಮಕ ಪರಿಣಾಮ ಬೀರಿದೆ. ಹೀಗಾಗಿ ಸರ್ಕಾರ ಯೋಜನೆಯನ್ನು ಪುನರಾರಂಭಿಸಬೇಕೆಂದು ವಿದ್ಯಾರ್ಥಿಯೊಬ್ಬರು ಸರ್ಕಾರವನ್ನು ಒತ್ತಾಯಿಸಿದರು.

ಹಾಸನ ಜಿಲ್ಲೆಯ ಪೂರ್ವಿಕಾ ಎಂಬ ಬಾಲಕಿ, ಹವಾಮಾನ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಶಿಕ್ಷಣ ಮತ್ತು ದೈನಂದಿನ ಜೀವನದ ಮೇಲೆ ಅದರ ದುಷ್ಪರಿಣಾಮಗಳನ್ನು ವಿವರಿಸಿದರು.

ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಮತ್ತು ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸೌರ ಮತ್ತು ಪವನ ಶಕ್ತಿಯಂತಹ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಪ್ರೋತ್ಸಾಹಿಸಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಇದಲ್ಲದೆ, ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್ ಬಗ್ಗೆಯೂ ವಿದ್ಯಾರ್ಥಿಗಳು ಸಮಾಲೋಚನೆ ನಡೆಸಿದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬದಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಜರಾಗಿದ್ದರು. ಈ ವೇಳೆ ವಿದ್ಯಾರ್ಥಿಗಳ ಸಲಹೆ ಹಾಗೂ ಮನವಿಯನ್ನು ಆಲಿಸಿ ಸ್ಪಂದನೆ ನೀಡಿದರು. ಇದೇ ವೇಳೆ ಸಿಎಂ ಗೈರುಹಾಜರಾಗಿದ್ದಕ್ಕೆ ಕೆಲ ಮಕ್ಕಳು ಬೇಸರ ವ್ಯಕ್ತಪಡಿಸಿದ್ದರು ಅಲ್ಲದೆ, ಮುಖ್ಯಮಂತ್ರಿಗಳಿದ್ದಿದ್ದರೆ ಮತ್ತಷ್ಟು ಪ್ರಶ್ನೆಗಳನ್ನು ಕೇಳಬಹುತಿತ್ತು ಎಂದು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com