ಸಂವಿಧಾನ ವಿರೋಧಿಗಳಿಂದ ಬದಲಾವಣೆ ಮಾತು; ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ: ಸಿಎಂ ಸಿದ್ದರಾಮಯ್ಯ

ಸಂವಿಧಾನದದಿಂದಲೇ ನಾನು 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದು, ಜನಾಶೀರ್ವಾದ ಇರುವವರಿಗೂ ಯಾರಿಗೂ ಜಗ್ಗಲ್ಲ, ಬಗ್ಗಲ್ಲ.
CM Siddaramaiah presented award certificates
ಪ್ರಶಸ್ತಿ ಪತ್ರ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಸಂವಿಧಾನ ವಿರೋಧಿಗಳು ಅದನ್ನು ಬದಲಾಯಿಸುವ ಮಾತುಗಳನ್ನಾಡುತ್ತಿದ್ದರೆ, ಆದರೆ ನಮ್ಮ ಪಕ್ಷ ಅದರ ರಕ್ಷಣೆಗಾಗಿ ಹೋರಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ದಿನಾಚರಣೆ ಹಾಗೂ ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರ ವಿತರಿಸಿದ ಮಾತನಾಡಿದ ಮುಖ್ಯಮಂತ್ರಿ, ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ , ಆರ್.ಎಸ್.ಎಸ್‌ ವಿರೋಧಿಸಿದ್ದರು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ ಎಂದರು.

ಎಲ್ಲರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಾಧ್ಯ ಎಂದು ಅಂಬೇಡ್ಕರ್ ಹೇಳಿದ್ದರು. ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ರಾಜ್ಯ ಸರ್ಕಾರ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆ. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದೇವೆ. ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು. ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ.ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದು ಮುಖ್ಯಮಂತ್ರಿ ಹೇಳಿದರು.

ವಿಶ್ವದಲ್ಲಿ ಅತೀ ದೀರ್ಘಕಾಲ ಜಾರಿಯಲ್ಲಿರುವ ಸಂವಿಧಾನ ನಮ್ಮದಾಗಿದೆ. ಸಂವಿಧಾನ ಜಾರಿ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಎಚ್ಚರಿಕೆಯನ್ನು ನಾವ್ಯಾರೂ ಮರೆಯಬಾರದು. ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ಅವರು ನೀಡಿದ್ದರು. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದರು‌. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

CM Siddaramaiah presented award certificates
ಸಂವಿಧಾನ ದಿನ: ಬೆಂಗಳೂರು ಸೇರಿದಂತೆ ರಾಜ್ಯದ 10 ನಗರಗಳಲ್ಲಿ ಸಂವಿಧಾನ ಪೀಠಿಕೆ ಪ್ರತಿಕೃತಿ ನಿರ್ಮಾಣ

ಆರ್ಥಿಕ ಅಸಮಾನತೆ, ಸಾಮಾಜಿಕ ಅಸಮಾನತೆ ಇರುವ ಸಮಾಜಕ್ಕೆ ನಾವು ಕಾಲಿಡುತ್ತಿದ್ದೇವೆ. ಆದ್ದರಿಂದ ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಳ್ಳಬೇಕಿದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು, ಪಾಲಿಸುವುದು ಎಂದರೆ ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವವನ್ನು ಪಾಲಿಸುವುದೇ ಆಗಿದೆ. ಸಂವಿಧಾನದದಿಂದಲೇ ನಾನು 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದು, ಜನಾಶೀರ್ವಾದ ಇರುವವರಿಗೂ ಯಾರಿಗೂ ಜಗ್ಗಲ್ಲ, ಬಗ್ಗಲ್ಲ ಎಂದು ಹೇಳುವ ಮೂಲಕ ರಾಜೀನಾಮೆ ಕೇಳುತ್ತಿರುವ ವಿಪಕ್ಷಗಳಿಗೆ ಕಠಿಣ ಸಂದೇಶ ರವಾನಿಸಿದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಸ್ವಾತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದ್ದು, ಸರ್ವರಿಗೂ ಸಮಾನತೆ ಒದಗಿಸಿದೆ. ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ಇಂದಿಗೂ ಪ್ರಸ್ತುತ. ಭಾರತವನ್ನು ಸಂವಿಧಾನ ಎನ್ನುವ ಗ್ರಂಥ ರಕ್ಷಣೆ ಮಾಡುತ್ತಿದ್ದು, ಇಂತಹ ಮಹಾನ್ ಗ್ರಂಥವನ್ನು ನೀಡಿದ ಅಂಬೇಡ್ಕರ್ ಅವರ ಪುತ್ಥಳಿಗಳು ಇಂದು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಇವೆ. ಇಡೀ ವಿಶ್ವಕ್ಕೆ ಭಾರತದ ಸಂವಿಧಾನ ಮಾದರಿಯಾಗಿದ್ದು, ಅದರ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com