ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ KSRTCಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೊರಟ್ಟಿದ್ದ ಕಾರು ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿ KSRTCಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪುರುಷರು ಓರ್ವ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement