'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು' ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರ ಸ್ವಾಮೀಜಿ

ತಮ್ಮ ಹೇಳಿಕೆ ಕುರಿತು ಪ್ರತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸ್ವಾಮೀಜಿ, "ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ ಎಂದಿದ್ದಾರೆ.
Kumara Chandrashekaranatha Swamiji
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ
Updated on

ಬೆಂಗಳೂರು: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಬುಧವಾರ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಹೇಳಿಕೆ ಕುರಿತು ಪ್ರತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸ್ವಾಮೀಜಿ, "ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ. ಎಲ್ಲರಂತೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ತಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ" ಎಂದು ಹೇಳಿದ್ದಾರೆ.

"ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳು. ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿರುತ್ತೇವೆ. ನಮ್ಮ ಶ್ರೀಮಠಕ್ಕೆ ಮುಸ್ಲಿಮರು ಸಹ ಬಂದು ಹೋಗುತ್ತಾರೆ. ನಾವು ಸಹ ಮುಸ್ಲಿಮರ ಮದುವೆ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಭಾಗಿಯಾಗಿರುತ್ತೇವೆ. ಆದ್ದರಿಂದ ಈ ಜನಾಂಗದ ಬಗ್ಗೆ ಯಾವುದೇ ಅಸಹಿಷ್ಣುತೆ ಹೊಂದಿಲ್ಲ" ಎಂದು ಸ್ಪಷ್ಟನೆ ನೀಡಿರುವ ಸ್ವಾಮೀಜಿ, ಆ ಹೇಳಿಕೆ ವಿಚಾರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.

ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com