ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ರಾಥೋಡ್ ಎಂಬುವರನ್ನು 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರPTI
Updated on

ಬೆಂಗಳೂರು: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ತಲಾ 55,000 ರೂಪಾಯಿ ದಂಡ ವಿಧಿಸಲಾಗಿದೆ.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಂದ್ರ ರಾಥೋಡ್ ಎಂಬುವರನ್ನು 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆಗೆ ಕರೆತರಲಾಗಿತ್ತು. ಆದರೆ ಆತ ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿದ್ದರು. ಈ ಸಾವಿನ ಕುರಿತಂತೆ ಅಪರಾಧ ತನಿಖಾ ಇಲಾಖೆ ತನಿಖೆಗೆ ಆದೇಶಿಸಿತ್ತು. ತನಿಖೆಯಲ್ಲಿ ಠಾಣೆಯಲ್ಲಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಮಹೇಂದ್ರರನ್ನು ತೀವ್ರವಾಗಿ ಥಳಿಸಿದ್ದು ಈ ಕಾರಣದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿತ್ತು.

ನಂತರ 2019ರ ಜುಲೈ 18ರಂದು ಸಿಐಡಿ ಅಧಿಕಾರಿಗಳು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ನಾಲ್ವರು ಪೊಲೀಸ್ ಸಿಬ್ಬಂದಿಗೆ ಶಿಕ್ಷೆ ವಿಧಿಸಿದೆ ಎಂದು ಸಿಐಡಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಗ್ರಹ ಚಿತ್ರ
ಪುತ್ತೂರು: ದಲಿತ ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿಯಲ್ಲಿ ಇರಿಸಿದ್ದ ಪ್ರಕರಣ; ನಾಲ್ವರ ಬಂಧನ

ಹೆಡ್ ಕಾನ್‌ಸ್ಟೆಬಲ್ ಎಜಾಜ್ ಖಾನ್, ಕಾನ್‌ಸ್ಟೆಬಲ್‌ಗಳಾದ ಕೇಶವ ಮೂರ್ತಿ, ಮೋಹನ್ ರಾಮ್ ಮತ್ತು ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ದಂಡ ಮತ್ತು ಐಪಿಸಿ ಕಲಂ 330ರ ಅಡಿಯಲ್ಲಿ ಐದು ವರ್ಷ ಜೈಲು ಮತ್ತು 25 ಸಾವಿರ ದಂಡ ವಿಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com