ಮಂಗಳೂರು: ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಸುಮಾರು ರೂ.1. 5 ಲಕ್ಷ ಮೊತ್ತದ 50 ಗ್ರಾಂ MDMA ಮಾದಕ ವಸ್ತು ಹಾಗೂ ಕಾರೊಂದನ್ನು ವಶಕ್ಕೆ ಪಡೆದಿದ್ದಾರೆ.
ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22) ಕುಂಪಲದ ಕಾರ್ತಿಕ್ (27) ಮತ್ತು ತೊಕ್ಕೊಟ್ಟುವಿನ ನಿಖಿಲ್ (28) ಬಂಧಿತ ಆರೋಪಿಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ತಿಳಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಜೀರಿನ ಕೈಗಾರಿಕಾ ಪ್ರದೇಶದಲ್ಲಿ ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ರೂ. 1,50,000 ಅಂದಾಜು ಮೊತ್ತದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕಾರು, ಮೂರು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ ರೂ. 7.77 ಲಕ್ಷದ್ದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement