ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಗರದಲ್ಲಿನ ಉದ್ಯಾನವನಗಳ ಸ್ವತ್ಛತೆ ಕಾಯ್ದುಕೊಳ್ಳುವುದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಉದ್ಯಾನವನಗಳಲ್ಲಿ ನಾಯಿಗಳ ಮಲ ವಿಸರ್ಜನೆಗೆ ಕಾರಣವಾಗುವವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ನಗರದ ಉದ್ಯಾನವನಗಳಲ್ಲಿ ಸಾಕು ನಾಯಿಗಳಿಂದ ಆಗುತ್ತಿರುವ ಮಲ ವಿಸರ್ಜನೆಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಕೋರಿ ಮೆಸೆರ್ಸ್ ಕಂಪ್ಯಾಷನ್ ಅನ್ಲಿಮಿಟೆಡ್ ಪ್ಲಸ್ ಆ್ಯಕ್ಷನ್ (ಕೂಪ) ಎಂಬ ಸರ್ಕಾರೇತರ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್​.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ಪೀಠ, ಹಲವು ಮಾರ್ಗಸೂಚಿಗಳನ್ನು ರಚಿಸಿ, ಅರ್ಜಿ ಇತ್ಯರ್ಥಪಡಿಸಿತು.

ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿರಲಿದೆ. ಆದರೆ, ತೋಟಗಾರಿಕೆ ಇಲಾಖೆ, ಬಿಬಿಎಂಪಿ ಅಧಇಕಾರಿಗಳು, ಸಿಬ್ಬಂದಿ ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಜನರಿಂದ 1288 ದೂರು ದಾಖಲಾಗಿವೆ.

ಸಂಗ್ರಹ ಚಿತ್ರ
ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಆದೇಶ

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿ ಉಪದ್ರವ ಉಂಟಾಗದಂತೆ ನಿಷೇಧಿಸುವ ಅವಕಾಶವಿದ್ದರೂ ಅವುಗಳನ್ನು ಜಾರಿ ಮಾಡುವ ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಅರ್ಜಿದಾರರು ವಿಚಾರಣ ವೇಳೆ ತಿಳಿಸಿದರು.

ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ, ನಾಯಿಗಳ ವಿಕೃತ ನಡೆಯಿಂದ ಉದ್ಯಾನಕ್ಕೆ ಭೇಟಿ ನೀಡುವವರಿಗೆ ರಕ್ಷಣೆ ನೀಡಬೇಕಿದೆ. ಸಾರ್ವಜನಿಕ ಉದ್ಯಾನಗಳಲ್ಲಿ ಎಲ್ಲಾ ರೀತಿಯ ರೀತಿಯ ಸ್ವಚ್ಛತೆ ಕಾಯ್ದುಕೊಳ್ಳುವುದು ಸರ್ಕಾರ ಹಾಗೂ ಬಿಬಿಎಂಪಿ ಜವಾಬ್ದಾರಿಯಾಗಿದೆ ಎಂದು ಆದೇಶಿಸಿತು. ಅಲ್ಲದೆ, ಉದ್ಯಾನವನಗಳಲ್ಲಿ ಸಾಕುನಾಯಿ ಮಲ ಮಾಡಿಸುವ ಮಾಲೀಕರಿಗೆ ದಂಡ ವಿಧಿಸುವಂತೆ ಸೂಚನೆ ನೀಡಿತು.

ಸಂಗ್ರಹ ಚಿತ್ರ
ರಸ್ತೆಗಳನ್ನು ಸರಿಪಡಿಸಲು ಬಿಬಿಎಂಪಿ ELCITA ವನ್ನು ತೊಡಗಿಸಿಕೊಳ್ಳಲಿ, ಗುತ್ತಿಗೆದಾರರನ್ನು ಅಲ್ಲ: ಕಿರಣ್ ಮಜುಂದಾರ್ ಶಾ ಸಲಹೆ

ನ್ಯಾಯಾಲಯದ ಹೊರಡಿಸಿರುವ ಮಾರ್ಗಸೂಚಿ ಇಂತಿದೆ...

  • ಸ್ವಚ್ಚತೆ ಕಾಯ್ದಕೊಳ್ಳುವುದು ಸೇರಿದಂತೆ ಇತರೆ ನಿಯಮಗಳ ಉಲ್ಲಂಘನೆ ಮಾಡುವವರಿಗಿಂತಲೂ ವಿಧಿಸುವ ದಂಡಕ್ಕಿಂತಲೂ, ನಾಯಿಯ ಮಲ ವಿಸರ್ಜನೆ ಕಾರಣವಾಗುವ ಅವುಗಳ ಮಾಲೀಕರಿಗೆ ವಿಧಿಸುವ ದಂಡ ಹೆಚ್ಚಿನ ಪ್ರಮಾಣದ್ದಾಗಿರಬೇಕು.

  • ಬಿಬಿಎಂಪಿ ಅಧಿಕಾರಿಗಳು ಕರ್ನಾಟಕ ಉದ್ಯಾನವನಗಳು, ಆಟದ ಮೈದಾನಗಳು ಮತ್ತು ಮುಕ್ತ ಸ್ಥಳಗಳ(ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ 1985ನ್ನು ಅಕ್ಷರಶಃ ಜಾರಿ ಮಾಡಬೇಕು.

  • ಉದ್ಯಾನವನಗಳು ಸೇರಿದಂತೆ ಬಿಬಿಎಂಪಿ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮಗಳು 2016ರನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ನಿಯಮಗಳ ತಿದ್ದುಪಡಿಗೆ ಪಾಲಿಕೆ ಕ್ರಮ ವಹಿಸಬೇಕು.

  • ಉದ್ಯಾನವನಗಳಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ನಿರ್ವಹಣೆಗಾಗಿ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಪ್ರಾಧಿಕಾರಗಳು ಅಗತ್ಯ ಬಜೆಟ್ ಮೀಸಲಿಡಬೇಕು.

  • ಉದ್ಯಾನವನಗಳ ಕುರಿತ ಜಾಗರೂಕತೆಯನ್ನು ಕಾಯ್ದುಕೊಳ್ಳುವುದಕ್ಕಾಗಿ ರಾಜ್ಯ ಸರ್ಕಾರ, ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಶಾಶ್ವತವಾದ ಕಾರ್ಯವಿಧಾನವನ್ನು ರೂಪಿಸಿ ಅಭಿವೃದ್ಧಿ ಪಡಿಸಬೇಕು.

  • ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯೆಯುವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದಯಕೊಳ್ಳುವುದು ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯ ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿದೆ.

  • ಉದ್ಯಾನವನಗಳ ಸಂರಕ್ಷಣೆಗಾಗಿ ಮೇಲ್ವಿಚಾರಣೆ ಮಾಡವುದಕ್ಕಾಗಿ ತಂಡಗಳನ್ನು ನಿಯೋಜಿಸುವ ಸಂಬಂಧ ಸೂಕ್ತ ನಿಯಮಗಳನ್ನು ಅಳವಡಿಸುವುದು ಮತ್ತು ತಪ್ಪಿತಸ್ಥರಿಗೆ ದಂಡ ವಿಧಿಸುವ ಸಲುವಾಗಿ ಬಿಬಿಎಂಪಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ಮಾಡಿಕೊಳ್ಳಬಹುದಾಗಿದೆ.

  • ತೋಟಗಾರಿಕೆ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡವನ್ನು ರಚಿಸಿ, ಕಾಲಕಾಲಕ್ಕೆ ನಗರದ ಎಲ್ಲ ಪ್ರಮುಖ ಉದ್ಯಾನವನಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ವಚ್ಛತೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಸಂಬಂಧದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು, ಜೊತೆಗೆ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com