ಬೆಂಗಳೂರು: ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸಲು ಮುಂದಾಗಿರುವ ಬಿಬಿಎಂಪಿ, ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ಡಿಸಿಎಂ ಡಿಕೆ,ಶಿವಕುಮಾರ್ ಅವರ ಸೂಚನೆ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ನಗರದ ಎಲ್ಲಾ ಎಂಟು ವಲಯಗಳ 217 ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ತಮಗೆ ನಿಯೋಜಿಸಿರುವ ವಾರ್ಡ್‌ನಲ್ಲಿ ಕಡ್ಡಾಯವಾಗಿ ಪ್ರತಿ ಬುಧವಾರ ಕಚೇರಿಯ ಅವಧಿಯಲ್ಲಿ ಹಾಜರಿರಬೇಕು. ಸಾರ್ವಜನಿಕರೊಂದಿಗೆ ಸಭೆ ನಡೆಸಿ, ಅವರ ದೂರು, ಸಮಸ್ಯೆಗಳನ್ನು ಆಲಿಸಬೇಕು. ಇತರೆ ಅಧಿಕಾರಿಗಳ ಸಹಯೋಗದೊಂದಿಗೆ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಸಭೆ ನಡೆಯುವ ಕುರಿತು ಪ್ರಚಾರ ಮಾಡಬೇಕು. ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳಿದ್ದರೆ, ಆಯಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ವಾರ್ಡ್ ಹಂತದಲ್ಲಿಯೇ ಪರಿಹರಿಸಬೇಕು. ಅಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ವಲಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಸೂಕ್ತ ಪ್ರಸ್ತಾವವನ್ನು ಸಲ್ಲಿಸಬೇಕು,
ವಾರ್ಡ್ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪ್ರಸ್ತಾವನೆಗಳನ್ನು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ವಾರ್ಡ್‌ಗೆ ನಿಯೋಜಿಸಿರುವ ನೋಡಲ್ ಅಧಿಕಾರಿಯ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯುಳ್ಳ ಪಟ್ಟಿಯನ್ನು ಪಾಲಿಕೆಯ ವೆಬ್‌ಸೈಟ್ bbmp.gov.in/home ನಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Advertisement