ಸಂಗ್ರಹ ಚಿತ್ರ
ಸಂಗ್ರಹ ಚಿತ್ರPTI

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲು!

ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published on

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಶಿಕ್ಷಕಿಯ ದೂರಿನ ಮೇರೆಗೆ ಚನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆ ಪೊಲೀಸರು ನ.26ರಂದು ಐಪಿಸಿ ಕಲಂ 354, 506, 509 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಆರೋಪವನ್ನು ಗುರಪ್ಪ ನಾಯ್ಡು ತಳ್ಳಿಹಾಕಿದ್ದು, ಇದು ಸುಳ್ಳು ಮತ್ತು ನಿರಾಧಾರ ಎಂದು ಹೇಳಿದ್ದಾರೆ.

ಸಂಗ್ರಹ ಚಿತ್ರ
ಮೈಸೂರು: ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳು, ಹಾಗೂ ತಾಯಿಯನ್ನು ಕೊಂದ ವ್ಯಕ್ತಿಗೆ ಮರಣದಂಡನೆ

X

Advertisement

X
Kannada Prabha
www.kannadaprabha.com