ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಬಿಜೆಪಿ ಮಹಿಳಾ ಮೋರ್ಚಾ ಆರೋಪ

ಗುರಪ್ಪ ನಾಯ್ಡು ಆಡಿಯೋ ಮತ್ತು ವಿಡಿಯೋ ರೆಕಾರ್ಡ್ ಬಳಸಿಕೊಂಡು ಶಾಲೆಯ ಶಿಕ್ಷಕಿಯರಿಗೆ ಬೆದರಿಕೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ
K. Manjula
ಕೆ. ಮಂಜುಳಾ
Updated on

ಬೆಂಗಳೂರು: ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮತ್ತು ಅವರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ಆರೋಪಿಸಿದೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕೆ. ಮಂಜುಳಾ, ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪ್ಪ ನಾಯ್ಡು ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಗಂಭೀರ ಲೈಂಗಿಕ ಆರೋಪ ಕೇಳಿಬಂದಿರುವ ಗುರಪ್ಪ ನಾಯ್ಡು ವಿರುದ್ಧ ಕ್ರಮ ಕೈಗೊಳ್ಳದ ಕಾಂಗ್ರೆಸ್, ಮುಸ್ಲಿಂ ವಿರುದ್ಧ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಅವರನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಟೀಕಿಸಿದರು.

ಗುರಪ್ಪ ನಾಯ್ಡು ಆಡಿಯೋ ಮತ್ತು ವಿಡಿಯೋ ರೆಕಾರ್ಡ್ ಬಳಸಿಕೊಂಡು ಶಾಲೆಯ ಶಿಕ್ಷಕಿಯರಿಗೆ ಬೆದರಿಕೆ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಂಜುಳಾ ಆರೋಪಿಸಿದರು.

ಹುಣಸೂರಿನಲ್ಲಿ ಕಿರು ಹಣಕಾಸು ಸಂಸ್ಥೆಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸರಕಾರ ಮಧ್ಯ ಪ್ರವೇಶಿಸಿ ಸಮಗ್ರ ತನಿಖೆ ನಡೆಸಿ ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

K. Manjula
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ದೌರ್ಜನ್ಯ ಪ್ರಕರಣ ದಾಖಲು!

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 10 ದಿನದಲ್ಲಿ ಏಳು ಬಾಣಂತಿಯರ ಸಾವಿನ ಬಗ್ಗೆ ನೋವು ವ್ಯಕ್ತಪಡಿಸಿದ ಮಂಜುಳಾ, ಆರೋಗ್ಯ ಕ್ಷೇತ್ರದಲ್ಲಿ ಹೊಣೆಗಾರಿಕೆ ಖಾತರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಬೇಕು, ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com