ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR: ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಗೆ ಮತದಾನ ನಿರಾಕರಿಸುವ ಕಾನೂನು ಜಾರಿಗೆ ತರಬೇಕು ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದೆ.
HD Kumaraswamy
ಹೆಚ್. ಡಿ.ಕುಮಾರಸ್ವಾಮಿ
Updated on

ಚನ್ನಪಟ್ಟಣ: ಮುಸ್ಲಿಂರಿಗೆ ಮತದಾನದ ಹಕ್ಕನ್ನು ನಿರಾಕರಿಸಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಿಸಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ತನ್ನ ವಿರುದ್ಧ ವರ್ಣನಿಂದನೆ ಮಾಡಿದ್ದ ಸಚಿವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಸ್ವಾಮೀಜಿ ವಿರುದ್ಧ ತರಾತುರಿಯಲ್ಲಿ ಕ್ರಮ ಕೈಗೊಂಡಿರುವುದನ್ನು ಪ್ರಶ್ನಿಸಿದ್ದಾರೆ.

ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂರಿಗೆ ಮತದಾನ ನಿರಾಕರಿಸುವ ಕಾನೂನು ಜಾರಿಗೆ ತರಬೇಕು ಎಂದು ಇತ್ತೀಚಿಗೆ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕೇಸ್ ದಾಖಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಾಯ್ತಪ್ಪಿನಿಂದ ಅಂತಹ ಹೇಳಿಕೆ ನೀಡಿರುವುದಾಗಿ ಸ್ವಾಮೀಜಿ ಕ್ಷಮೆ ಕೋರಿದ್ದಾರೆ. ಆದಾಗ್ಯೂ, ಸರ್ಕಾರ ಕೇಸ್ ದಾಖಲಿಸಿದ್ದು, ತರಾತುರಿಯಲ್ಲಿ ನೋಟಿಸ್ ನೀಡಿದೆ. ಆದರೆ, ನನ್ನ ವಿರುದ್ಧ ವರ್ಣನಿಂದನೆ ಮಾಡಿದ್ದ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಥವಾ ನೋಟಿಸ್ ನೀಡಿಲ್ಲ. ಯಾವುದೇ ಕೇಸ್ ಕೂಡಾ ದಾಖಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಅರಾಜತೆ ಬರಲಿದೆ. ಕಾದು ನೋಡಿ ಎಂದರು. ಇತ್ತೀಚಿಗೆ ನಡೆದ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದರು.

HD Kumaraswamy
ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗುವಂತೆ ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್

ಮತ್ತೊಂದೆಡೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಸ್ವಾಮೀಜಿ ವಿರುದ್ಧದ ಕೇಸ್ ದಾಖಲಿಸುವ ಮೂಲಕ ಒಕ್ಕಲಿಗ ಸಮುದಾಯವನ್ನು ಅಪಮಾನಿಸಲಾಗಿದೆ. ಒಂದು ವೇಳೆ ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com