ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ; ಕದ್ದ ಮಾಲು ವಾಪಸ್ಸು ಕೊಟ್ಟರೆ ಕಳ್ಳತನ ಮಾಫಿ ಆಗುತ್ತದೆಯೇ?

ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.
ವಿಪಕ್ಷ ನಾಯಕ ಆರ್.ಅಶೋಕ್
ವಿಪಕ್ಷ ನಾಯಕ ಆರ್.ಅಶೋಕ್
Updated on

ಬೆಂಗಳೂರು: ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ 14 ನಿವೇಶನಗಳನ್ನು ಮಡಾಗೆ ವಾಪಸ್ ನೀಡುವ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಆರ್, ಅಶೋಕ್ ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದಿದ್ದಾರೆ.

ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? 'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.

ಸಿಎಂ ಸಿದ್ದರಾಮಯ್ಯ ನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ 'ದೊಡ್ದ' ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್
ಮುಡಾ ನಿವೇಶನ ವಾಪಸ್: ಪತ್ನಿ ತೀರ್ಮಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com