ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಿ, ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕೆಲವರು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲಿಸಿದೆ.
1,000 ಕೋಟಿ ರೂ. ಹಣದ ಮೂಲ ಯಾವುದು? ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. PMLA ಅಡಿ ಪ್ರಕರಣ ಬರುತ್ತದೆ. ವಿಚಾರಣೆಗೊಳಪಡಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಆಗ್ರಹಿಸಿದ್ದಾರೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಗಲಭೆಯನ್ನು ಪ್ರಚೋದಿಸುವ ಉದ್ದೇಶದಿಂದ ಇತರರನ್ನು ದುರುದ್ದೇಶಪೂರ್ವಕವಾಗಿ ಅಥವಾ ಉದ್ದೇಶಪೂರ್ವಕವಾಗಿ ಪ್ರಚೋದಿಸುವುದಕ್ಕೆ ಸಂಬಂಧಿಸಿದ ಸೆಕ್ಷನ್ ಗಳಾಗಿವೆ.
ಯತ್ನಾಳ್ ಭಾನುವಾರ ದಾವಣಗೆರೆಯಲ್ಲಿ ಕಾಂಗ್ರೆಸ್ “ಮಹಾನ್ ನಾಯಕ” ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಮತ್ತು ಮುಖ್ಯಮಂತ್ರಿಯಾಗಲು ಅಪಾರ ಪ್ರಮಾಣದ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಹೇಳಿದ್ದರು.
Advertisement