ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ಮೂಲದ ಕುಟುಂಬವನ್ನು ಬಂಧಿಸಲಾಗಿದೆ. ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ದಾವಣಗೆರೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮೂಲದ ಫಾತಿಮಾ ಅಲ್ಲಿ ಅಲ್ತಾಫ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಉಳಿದಂತೆ, ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹನೀಫ್ ಕೂಡ ಪಾಕಿಸ್ತಾನದವನಾಗಿದ್ದು ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದಾನೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಪುತ್ರ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ.
Advertisement