ಮುಡಾ ಹಗರಣ: 14 ನಿವೇಶನಗಳನ್ನು ವಾಪಸ್ ನೀಡುವಂತೆ ಸಿದ್ದರಾಮಯ್ಯ ಪತ್ನಿಗೆ ಸಲಹೆ ನೀಡಿದ್ದು ಕಪಿಲ್ ಸಿಬಲ್!

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದನ್ನು ಹಿರಿಯ ವಕೀಲ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಪ್ರಶ್ನಿಸಿದ್ದರು,
ಕಪಿಲ್ ಸಿಬಲ್
ಕಪಿಲ್ ಸಿಬಲ್
Updated on

ಬೆಂಗಳೂರು: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರ ಸಲಹೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮಂಜೂರು ಮಾಡಿದ್ದ 14 ನಿವೇಶನಗಳನ್ನು ಒಪ್ಪಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದನ್ನು ಹಿರಿಯ ವಕೀಲ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಪ್ರಶ್ನಿಸಿದ್ದರು, ಆದರೆ ಪ್ರಾಸಿಕ್ಯೂಷನ್ ರದ್ದಾಗದ ಕಾರಣ ನಿವೇಶನ ವಾಪಸ್ ನೀಡುವಂತೆ ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ, ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಬಲ್ ಈ ರೀತಿ ಮಾಡಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಸಿಬಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಪತ್ನಿ ಕೂಡ ಗಿಫ್ಟ್ ಡೀಡ್ ಪಡೆಯಲು ಯೋಜಿಸುತ್ತಿದ್ದಾರೆ, ಅದರ ಮೂಲಕ ಅವರು ತಮ್ಮ ಸಹೋದರ ಮಲ್ಲಿಕಾರ್ಜುನ ಸ್ವಾಮಿಯಿಂದ 2010 ರಲ್ಲಿ 3.16 ಎಕರೆ ಭೂಮಿಯನ್ನು ಪಡೆದಿದ್ದರು, ಜಾರಿ ನಿರ್ದೇಶನಾಲಯ ಇಸಿಐಆರ್ ನೋಂದಾಯಿಸುವ ಸುಳಿವು ಸಿದ್ದರಾಮಯ್ಯ ಅವರಿಗೆ ಸಿಕ್ಕಿದ್ದು, ಹೀಗಾಗಿ ಅವರು ಸಿಬಲ್ ಸೇರಿದಂತೆ ತಮ್ಮ ಕಾನೂನು ಸಲಹೆಗಾರರನ್ನು ಸಂಪರ್ಕಿಸಿದ್ದರು ಎಂದು ಮೂಲಗಳು ತಿಳಿಸಿವೆ. ತಡವಾಗಿಯಾದರೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರಿಗೆ ಈ ಕ್ರಮ ಸ್ವಲ್ಪ ಮಟ್ಟಿಗೆ ನೆರವಾಗುವ ಸಾಧ್ಯತೆ ಇದೆ. ಜುಲೈ 4 ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಈ ವಿಷಯಕ್ಕೆ ಪ್ರತಿಕ್ರಿಯಿಸಿದರು.

ಕಪಿಲ್ ಸಿಬಲ್
ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ, ಮುಡಾ ಆಯುಕ್ತರಿಗೆ ಪತ್ರ!

ಮುಡಾ ತನ್ನ ಹಿರಿಯ ಸಹೋದರ ನೀಡಿದ ಭೂಮಿಯನ್ನು ಒತ್ತುವರಿ ಮಾಡಿ ವಸತಿ ಬಡಾವಣೆ ನಿರ್ಮಿಸಿದ್ದರಿಂದ ಮುಡಾ ಪ್ರಾಧಿಕಾರ ತನ್ನ ಪತ್ನಿಗೆ 14 ನಿವೇಶನಗಳನ್ನು ಮಂಜೂರು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಮುಡಾ 62 ಕೋಟಿ ಪರಿಹಾರ ನೀಡಿದರೆ ನಿವೇಶನಗಳನ್ನು ವಾಪಸ್ ನೀಡುವುದಾಗಿ ತಿಳಿಸಿದ್ದರು.

ಇದೇ ವೇಳೆ ಮುಡಾ ಮಾಜಿ ನೌಕರ ಹಾಗೂ ಆರ್‌ಟಿಐ ಕಾರ್ಯಕರ್ತ ಪಿ.ಎಸ್.ನಟರಾಜ್ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ಕುಡಾ) ಸೆಕ್ಷನ್ 15 ಮತ್ತು 25ನೇ ಕಾಯ್ದೆಯ ಉಲ್ಲಂಘಿಸಿ ವರುಣಾ ಮತ್ತು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಮೌಖಿಕ ಸೂಚನೆಯ ಮೇರಗೆ ಮುಡಾ ಪ್ರಾಧಿಕಾರ 387 ಕೋಟಿ ರೂ. ಹಣ ಖರ್ಚು ಮಾಡಿದೆ.

ಸೋಮವಾರ ರಾತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೈರತಿ ಸುರೇಶ್, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಲೆಕ್ಕ ಪರಿಶೋಧಕರೊಂದಿಗೆ ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ನಿವೇಶನಗಳನ್ನು ಒಪ್ಪಿಸುವುದು ಪಿಎಂಎಲ್‌ಎ ಪ್ರಕರಣವನ್ನು ಎದುರಿಸಲು ಸಿಎಂಗೆ ಸಹಾಯ ಮಾಡುತ್ತದೆಯೇ ಮತ್ತು ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠಕ್ಕೆ ತೆರಳಿ ಲೋಕಾಯುಕ್ತ ತನಿಖೆಯಿಂದ ತಪ್ಪಿಸಿಕೊಳ್ಳಲು ಈ ಕ್ರಮವು ಎಷ್ಟರ ಮಟ್ಟಿಗೆ ಸಹಾಯ ಮಾಡುತ್ತದೆ ಎಂದು ಅವರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಡ 14 ಸೈಟ್‌ಗಳನ್ನು ಒಪ್ಪಿಸುವಂತೆ ಮತ್ತು ಆದಷ್ಟು ಬೇಗ ಪ್ರಕರಣದಿಂದ ದೂರವಾಗುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com