ಬೆಂಗಳೂರು: ಕಿರುತೆರೆ ನಟಿಯೊಬ್ಬರು ಮದುವೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ 25 ವರ್ಷದ ಮದನ್ ಎಂದು ತಿಳಿದು ಬಂದಿದ್ದು, ಕಿರುತೆರೆ ನಟಿ ವೀಣಾ ಅವರನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಸೀರಿಯಲ್ ನಟಿ ವೀಣಾ ಅವರೊಂದಿಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮದನ್ ಸೆಪ್ಟೆಂಬರ್ ಒಂದರಂದು ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಆದರೆ ವೀಣಾ ಮದುವೆಗೆ ನಿರಾಕರಿಸಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನ ನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಪಾರ್ಟಿಯಲ್ಲಿ ಮದನ್, ವೀಣಾಗೆ ಮದುವೆ ಪ್ರಸ್ತಾಪ ಮಾಡಿದ್ದಾರೆ. ಆದರೆ ನಟಿ ಮದುವೆ ಪ್ರಸ್ತಾಪ ನಿರಾಕರಿಸಿದಕ್ಕೆ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಟಿ ವೀಣಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Advertisement