ಲೋಕಾಯುಕ್ತ ಪೊಲೀಸರ ಕೆಟ್ಟ ತನಿಖೆಯಿಂದಾಗಿ ಆರೋಪಿಗಳು ಖುಲಾಸೆ: ನ್ಯಾಯಾಧೀಶ ಕೆ.ಎಂ ರಾಧಾಕೃಷ್ಣ ಬೇಸರ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಕಳಪೆ ತನಿಖೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ನ್ಯಾಯಾಧೀಶರು ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಲೋಕಾಯುಕ್ತ ವಿಶೇಷ ನ್ಯಾಯಾಲಯವು ಹಲವಾರು ಪ್ರಕರಣಗಳಲ್ಲಿ ಕೆಟ್ಟ ರೀತಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಪ್ರಮುಖ ಪ್ರಕರಣಗಳಲ್ಲಿ ‘ಬಿ’ (ಮುಚ್ಚುವಿಕೆ) ರಿಪೋರ್ಟ್ ಸಲ್ಲಿಸುವಷ್ಟು ದಿಟ್ಟತನ ತೋರಿದ್ದಾರೆ ಎಂದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಮುಖ ಆರೋಪಿಗಳು ಮತ್ತು ಪ್ರಭಾವಿ ಅಧಿಕಾರಿಗಳ ಪರವಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ವಿರುದ್ಧ ನೇರ ಆರೋಪ ಮತ್ತು ಆರೋಪ ಕೇಳಿ ಬಂದಿರುವ ಅಧಿಕಾರಿಗಳ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸರು ನಿರ್ಲಕ್ಷಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಅವರು ಉದ್ದೇಶಪೂರ್ವಕವಾಗಿ ಆಪಾದಿತ ಅಧಿಕಾರಿಗಳಿಗೆ ಸಹಾಯ ಮಾಡಲು ಮತ್ತು ಕೇವಲ ಹೆಸರಿಗಾಗಿ ಮಾತ್ರ ಆರೋಪಪಟ್ಟಿ ಸಲ್ಲಿಸುತ್ತಾರೆ. ಅಧೀನ ಅಧಿಕಾರಿಗಳಿಗೆ ಸಹಾಯ ಮಾಡಲು ಸಮರ್ಥರಲ್ಲದ ಅಧಿಕಾರಿಗಳಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಆದೇಶಗಳನ್ನು ಪಡೆಯುತ್ತಿದ್ದಾರೆ ಎಂದು ಕಟುವಾಗಿ ನುಡಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ ಮತ್ತು ಇತರರನ್ನು ಒಳಗೊಂಡಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಲೋಕಾಯುಕ್ತ ಪೊಲೀಸರ ವಿಶ್ವಾಸಾರ್ಹತೆ ಮತ್ತು ಔಚಿತ್ಯದ ಬಗ್ಗೆ ಪ್ರಶ್ನೆಗಳು ಎದ್ದಿರುವ ಸಮಯದಲ್ಲಿ ಈ ಮಾತುಗಳು ಕೇಳಿ ಬಂದಿವೆ.

ಸಾಂದರ್ಭಿಕ ಚಿತ್ರ
ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ತನಿಖೆ ಆರಂಭ; ಸ್ನೇಹಮಯಿ ಕೃಷ್ಣ ಕರೆತಂದು ಸ್ಥಳ ಮಹಜರು

ವಿಶೇಷವಾಗಿ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಸುಶಿಕ್ಷಿತ, ಪ್ರಾಮಾಣಿಕ ಮತ್ತು ಸಮರ್ಥ ಪೊಲೀಸ್ ಅಧಿಕಾರಿಗಳನ್ನು ನೇಮಿಸಬೇಕು. ಅಕ್ರಮ ಗಣಿಗಾರಿಕೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಮತ್ತು ಅಪರಾಧ ತನಿಖಾ ಇಲಾಖೆಗೆ ನಿಯೋಜಿಸಬೇಕೆಂದು ನಾನು ಬಯಸುತ್ತೇನೆ. ಪರಿಣಾಮಕಾರಿ ತನಿಖೆ ಹಾಗೂ ನಿಜವಾದ ಅಪರಾಧಿಗಳಿಗೆ ಶಿಕ್ಷೆ ನೀಡು ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

ಅಂಕಿಅಂಶಗಳ ಉದ್ದೇಶಗಳಿಗಾಗಿ ವಿವಿಧ ಅಪರಾಧಗಳಿಗೆ ನೂರಾರು ಪ್ರಕರಣಗಳನ್ನು ದಾಖಲಿಸುವುದು ನಿಜವಾದ ಉದ್ದೇಶವನ್ನು ಪೂರೈಸುವುದಿಲ್ಲ. ಅಂತಹ ಪ್ರಕರಣಗಳು ಸಮಾಜಕ್ಕೆ ನ್ಯಾಯವನ್ನು ಒದಗಿಸುವ ಬದಲು ಅನ್ಯಾಯಕ್ಕೆ ಕಾರಣವಾಗುತ್ತವೆ ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಕಳಪೆ ತನಿಖೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ನ್ಯಾಯಾಧೀಶರು ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com