ಬೆಂಗಳೂರು: ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೂ. 50 ಕೋಟಿ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಲ್ಲಿ ಅವರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಉದ್ಯಮಿ ವಿಜಯ್ ತಾತ ದಾಖಲಿಸಿದ್ದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ. ನಿಖಿಲ್ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲುತ್ತಿದ್ದು, ಚುನಾವಣೆಗೆ 50 ಕೋಟಿ ರೂ. ಹಣ ನೀಡುವಂತೆ ನನ್ನನ್ನು ಕೇಳಿದ್ದರು. ಎಚ್.ಡಿ. ಕುಮಾರಸ್ವಾಮಿ ಕೂಡಾ ದೂರವಾಣಿ ಕರೆ ಮಾಡಿದ್ದರು. ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿರುವುದಾಗಿ ವರದಿಯಾಗಿತ್ತು.
Advertisement