ಇಂದು ಮಧ್ಯಾಹ್ನ 2 ರವರೆಗೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ವಾಣಿಜ್ಯ ಸೇವೆ ಸ್ಥಗಿತವಾಗಲಿದೆ.
ಇಂದು ಮಧ್ಯಾಹ್ನ 2 ರವರೆಗೆ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Updated on

ಬೆಂಗಳೂರು: ನಾಗಸಂದ್ರ ಹಾಗೂ ಮಾದಾವರ ನಡುವಿನ ಹೊಸ ರೈಲು ಮಾರ್ಗದಲ್ಲಿ ಸುರಕ್ಷತಾ ತಪಾಸಣೆ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವುಂಟಾಗಿದೆ.

ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ವಾಣಿಜ್ಯ ಸೇವೆ ಸ್ಥಗಿತವಾಗಲಿದೆ. ಈ ಅವಧಿಯಲ್ಲಿ ಪೀಣ್ಯ ಹಾಗೂ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಎಂದಿನಂತೆ ಸಂಚರಿಸಲಿದೆ. ನೇರಳೆ ಮಾರ್ಗದ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆಯಿಲ್ಲ.

ಹಸಿರು ಮಾರ್ಗದಲ್ಲಿ ವಿಸ್ತರಿತಗೊಂಡಿರುವ 3.7 ಕಿ.ಮೀ ದೂರದ ಈ ಮಾರ್ಗದಲ್ಲಿ ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್‌), ಮಾದಾವರ ಮೆಟ್ರೊ ನಿಲ್ದಾಣಗಳಿವೆ. ಸಿವಿಲ್‌ ಕಾಮಗಾರಿ ಬಳಿಕ ಆಗಸ್ಟ್‌ನಿಂದ ಸಾಮರ್ಥ್ಯ ಪರೀಕ್ಷೆ, ಸಿಗ್ನಲಿಂಗ್‌, ದೂರಸಂಪರ್ಕ, ವಿದ್ಯುತ್‌ ಸರಬರಾಜು ವ್ಯವಸ್ಥೆ ಸಿಸ್ಟಂ ಸಂಯೋಜನೆ, ಸಾಮರ್ಥ್ಯ ಪರಿಶೀಲನೆ ಸಹಿತ ಪ್ರಮುಖ ಪರೀಕ್ಷೆಗಳು ನಡೆದಿತ್ತು. ಸುರಕ್ಷತಾ ತಪಾಸಣೆ ತೃಪ್ತಿಕರವಾದರೆ ಆಯುಕ್ತರು ಶೀಘ್ರವೇ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ.

ಎರಡು ದಿನಗಳ ಕಾಲ ಗ್ರೀನ್ ಲೈನ್ ಮೆಟ್ರೋ ತಪಾಸಣೆ ನಡೆಯಲಿದೆ. ಇಂದು ಸತತ ನಾಲ್ಕು ಗಂಟೆಗಳ ಕಾಲ ಮೆಟ್ರೋ ಪ್ರಯಾಣಿಕರಿಗೆ ಸಮಸ್ಯೆ ಆಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com