
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದ್ದು ಇಂದು ವಿಚಾರಣೆಗೆ ಅವರು ಹಾಜರಾಗುವ ಸಾಧ್ಯತೆಯಿದೆ.
ಈ ವಿಷಯವನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಖಚಿತಪಡಿಸಿರುವ ಕೃಷ್ಣ, ಇಡಿ ತನ್ನ ಬೆಂಗಳೂರಿನ ಕಚೇರಿಯಲ್ಲಿ ವಿಚಾರಣೆಗಾಗಿ ನನ್ನನ್ನು ಕರೆದಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ(The New Indian Express) ಪ್ರತಿನಿಧಿಗೆ ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002 ರ ಅಡಿಯಲ್ಲಿ ತನಿಖೆಗೆ ಸಂಬಂಧಿಸಿದಂತೆ ನಾನು ಎಲ್ಲಾ ದಾಖಲೆಗಳೊಂದಿಗೆ ಅಲ್ಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.
ಈ ಮಧ್ಯೆ, ಚೆಕ್ ಬೌನ್ಸ್ ಪ್ರಕರಣದಲ್ಲಿ ಕೃಷ್ಣ ಅವರ ಮುಂದೆ ಹಾಜರಾಗಲು ವಿಫಲವಾದ ಕಾರಣಕ್ಕಾಗಿ ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. 2015ರ ಜೂನ್ 30ರಂದು ಕುಮಾರ್ ಎಂಬುವರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಸಿದ್ದರಾಮಯ್ಯ ಮತ್ತು ಇತರ ಆರೋಪಿಗಳ ವಿರುದ್ಧ ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಮುಂದೆ ಕೃಷ್ಣ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ನಾನು ಮುಂದಿನ ಸಲ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
Advertisement