ಬೆಂಗಳೂರು: ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ

ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾಕಿಸ್ತಾನಿ ಪ್ರಜೆಗಳ ಬಂಧನ
ಪಾಕಿಸ್ತಾನಿ ಪ್ರಜೆಗಳ ಬಂಧನ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಕಿಸ್ತಾನಿ ಪ್ರಜೆಗಳ ಬಂಧನ
ಹಿಂದೂ ಹೆಸರಲ್ಲಿ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕ್ ಪ್ರಜೆ ಸೇರಿ ನಾಲ್ವರ ಬಂಧನ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com