ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಖರ್ಚಿಗಾಗಿ 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ತಾತಾ ಕೊಟ್ಟಿರುವ ದೂರಿಗೆ ವಿರುದ್ಧವಾಗಿ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಅಮೃತಹಳ್ಳಿ ಪೊಲೀಸ್ ಠಾಣೆಗೆ ಪ್ರತಿ ದೂರು ದಾಖಲಿಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಜಯ್ ತಾತಾ ಸುಳ್ಳು ದೂರು ನೀಡಿದ್ದಾರೆ ಎಂದು ರಮೇಶ್ ಗೌಡ ಆರೋಪಿಸಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಇನ್ನು ದೂರು ನೀಡಿರುವ ವಿಜಯ್ ತಾತಾ, ಹೊರಗಿನವರಲ್ಲ. 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಹೆಚ್ಡಿ ಕುಮಾರಸ್ವಾಮಿ ಮತ್ತು ಮಾಜಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದಾರೆ. ದೂರಿನ ಅನ್ವಯ ಇಬ್ಬರ ವಿರುದ್ಧವೂ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವಿಜಯ್ ತಾತಾ ಆರೋಪದ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕನಲಿ ಕೆಂಡವಾಗಿದ್ದಾರೆ. ‘ಬೀದಿ ನಾಯಿ, ನರಿಗೆಲ್ಲಾ ಉತ್ತರ ಕೊಡೋಕೆ ಆಗುತ್ತಾ? ಅವನು ಯಾರು? ಅವನ ಬಗ್ಗೆ ಯಾಕೆ ಚರ್ಚೆ ಮಾಡಲಿ ಎಂದಿದ್ದಾರೆ.
Advertisement