ಗದಗ: ಐತಿಹಾಸಿಕ ಪರಂಪರೆಯ ಪ್ರಸಿದ್ಧ ಲಕ್ಕುಂಡಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾರ್ಪಡಿಸಲು ಗ್ರಾಮಸ್ಥರು ಸಂಕಲ್ಪ ಮಾಡಿದ್ದು, ಇದಕ್ಕಾಗಿ ವಿನೂತನ ಅಭಿಯಾನವೊಂದನ್ನು ಆರಂಭಿಸಿದ್ದಾರೆ.
ಗ್ರಾಮಸ್ಥರು ಲಕ್ಕುಂಡಿ ಗ್ರಾಮ ಪಂಚಾಯಿತಿಗೆ ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ, ಸಕ್ಕರೆ ನೀಡುವ ವಿನೂತನ ಅಭಿಯಾನವನ್ನು ಆರಂಭಿಸಲಾಗಿದೆ.
ಲಕ್ಕುಂಡಿ ಗ್ರಾಮದ ಗದಗದಿಂದ 12 ಕಿ.ಮೀ.ದೂರದಲ್ಲಿದ್ದು, ಈ ಗ್ರಾಮದ ಪಂಚಾಯಿತಿ ಸದಸ್ಯರು ಪ್ಲಾಸ್ಟಿಕ್ ಮುಕ್ತ ಗ್ರಾಮವಾಗಿರುವ ಸಂಕಲ್ಪವನ್ನು ಮಾಡಿದ್ದಾರೆ. ಇತ್ತೀಚೆಗೆ ನಡೆದ ಪಂಚಾಯಿತಿ ಸಭೆಯಲ್ಲಿ ಹೊಸ ಅಭಿಯಾನಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ರಾಮಸ್ಥರು 2 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ 2 ಕೆಜಿ ಸಕ್ಕರೆ, 10 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ 10 ಕೆಜಿ ಸಕ್ಕರೆ ನೀಡುವ ಕುರಿತು ನಿರ್ಧಾರ ಕೈಗೊಂಡಿದ್ದಾರೆ. ಶನಿವಾರದಿಂದಲೇ ಈ ಅಭಿಯಾನ ಆರಂಭವಾಗುತ್ತಿದೆ ಎನ್ನಲಾಗಿದೆ.
ಲಕ್ಕುಂಡಿ ಗ್ರಾಮ ಒಂದು ಕಾಲದಲ್ಲಿ 101 ಪುರಾತನ ದೇವಾಲಯಗಳು ಹಾಗೂ 101 ಕೆರೆಗಳನ್ನು ಹೊಂದಿತ್ತು ಎಂದು ನಂಬಲಾಗಿದೆ. ಆದರೆ, ಈಗ ಅವುಗಳಲ್ಲಿ ಕೆಲವು ಮಾತ್ರ ಉಳಿದಿವೆ. ಗ್ರಾಮದ ಸಮಗ್ರ ಅಭಿವೃದ್ಧಿ ಹಾಗೂ ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಲು ಇತ್ತೀಚೆಗೆ 5.66 ಕೋಟಿ ರೂ. ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ಸಿದ್ಧಪಡಿಸಿದ್ದು, ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರ 13 ಪುರಾತನ ದೇವಾಲಯಗಳ ಜೀರ್ಣೋದ್ಧಾರ ಹಾಗೂ ಜೀರ್ಣೋದ್ಧಾರ ಕಾರ್ಯ ಆರಂಭಿಸಿದೆ. ಗ್ರಾಮದಲ್ಲಿ ಎರಡು ಆಧುನಿಕ ಶೌಚಾಲಯ ಮತ್ತು ತಂಗುದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಗ್ರಾ.ಪಂ.ಸದಸ್ಯರು ಹಾಗೂ ನೌಕರರು ಶನಿವಾರ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದು, ಬಳಿಕ ಪ್ಲಾಸ್ಟಿಕ್ ಹಾವಳಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ.
ಕೆಲವೇ ವಾರಗಳಲ್ಲಿ ಇಡೀ ಗ್ರಾಮವನ್ನು ಸ್ವಚ್ಛಗೊಳಿಸುವುದು ಇವರ ಗುರಿಯಾಗಿದೆ. ಈ ಹಿಂದೆ ಲಕ್ಕುಂಡಿಯನ್ನು ಸ್ವಚ್ಛ ಮತ್ತು ಅಚ್ಚುಕಟ್ಟಾಗಿ ಇರಿಸಲು ಹಲವು ಪ್ರಯತ್ನಗಳನ್ನು ನಡೆಸಿದ್ದರೂ ವಿಫಲವಾಗಿತ್ತು. ಹೀಗಾಗಿ ಅಭಿಯಾನವನ್ನೇ ಆರಂಭಿಸಲು ನಿರ್ಧರಿಸಿದ್ದಾರೆ.
ಗ್ರಾ.ಪಂ.ಅಧ್ಯಕ್ಷ ಕೆ.ಎಸ್.ಪೂಜಾರ್ ಮಾತನಾಡಿ, ಕ್ಯಾರಿ ಬ್ಯಾಗ್ ನಂತಹ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಲವು ಕಾರ್ಯಕ್ರಮಗಳನ್ನು ನಡೆಸಿದರು ಜನರು ಸಹಕಾರ ನೀಡಲಿಲ್ಲ. ಪ್ಲಾಸ್ಟಿಕ್ ತ್ಯಾಜ್ಯ ನೀಡಿದರೆ ಸಕ್ಕರೆ ನೀಡುವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಹಣವನ್ನು ಮೀಸಲಿಟ್ಟಿದ್ದೇವೆ. ಶೀಘ್ರದಲ್ಲೇ ಲಕ್ಕುಂಡಿ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡುತ್ತೇವೆಂದು ಹೇಳಿದ್ದಾರೆ.
Advertisement