ರಾಜ್ಯ

ಬೆಂಗಳೂರು: ಪಿಜಿ 5ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಪಿಜಿ 5ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ
ಆತ್ಮಹತ್ಯೆ (ಸಾಂಕೇತಿಕ ಚಿತ್ರ)
Published On :

ಬೆಂಗಳೂರು: ಪೇಯಿಂಗ್ ಗೆಸ್ಟ್ ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಗೌತಮಿ (25) ಆತ್ಮಹತ್ಯೆಗೆ ಶರಣಾದ ಯುವತಿ, ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಪ್ರಶಾಂತ್ ಲೇಔಟ್ ನಲ್ಲಿ ಘಟನೆ ನಡೆದಿದೆ.

ಆಂಧ್ರಪ್ರದೇಶದ ಕಡಪ ಮೂಲದ ಯುವತಿ, ನಗರದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ. ಯಾರೂ ಅಲ್ಲ. ಈ ಬಗ್ಗೆ ತನಿಖೆ ನಡೆದಂತೆ ಹಾಗೂ ಶವವನ್ನು ಪೋಷಕರಿಗೆ ಹಸ್ತಾಂತರಿಸುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಬಳಿಕ ಪೋಷಕರಿಗೆ ಹಸ್ತಾಂತರಿಸಿದರು. ಈ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದು, ಸಾವಿಗೆ ಕಾರಣ ಪತ್ತೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.