ಕನ್ನಡ ರಾಜ್ಯೋತ್ಸವ: 69 ಸಾಧಕರ ಆಯ್ಕೆಗೆ ಸಮಿತಿ ರಚನೆ

69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 69 ಮಂದಿ ಸಾಧಕರ ಆಯ್ಕೆ ಮಾಡಲು ಕನ್ನಡ ಮತ್ತು ಸಂಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ 50 ಸದಸ್ಯರಿರುವ ಆಯ್ಕೆ ಸಲಹಾ ಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ.

ಸಚಿವ ಶಿವರಾಜ ತಂಗಡಗಿ ನೇತೃತ್ವದ ಸಲಹಾ ಸಮಿತಿ‌ 36 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವವರನ್ನು ಈ ಸಲಹಾ ಸಮಿತಿ‌ಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಡಾ.ಸಿ.ಎಸ್.ದ್ವಾರಕಾನಾಥ್, ಸಂಗೀತ ನಿರ್ದೇಶಕ ಹಂಸಲೇಖ, ನಿವೃತ್ತ ಐಎಎಸ್ ಅಧಿಕಾರಿ ರವಿಕುಮಾರ್, ನಟ ರವಿಚಂದ್ರನ್, ಕಲಬುರಗಿಯ ರಂಜಾನ್ ದರ್ಗಾ, ಬರಹಗಾರ ಮತ್ತು ಪರಿಸರವಾದಿ ನಾಗೇಶ್ ಹೆಗಡೆ, ಕೃಷಿ ತಜ್ಞ ಮಲ್ಲಿಕಾರ್ಜುನ ಹೊಸಪಾಳ್ಯ, ಪತ್ರಕರ್ತ ಸಿದ್ದರಾಜು, ರಂಗಕರ್ಮಿ ಸಿ.ಬಸವಲಿಂಗಯ್ಯ, ಧಾರವಾಡದ ಹಿಂದೂಸ್ತಾನಿ ಗಾಯಕ ಪಂ.ಎಂ.ವೆಂಕಟೇಶ್ ಕುಮಾರ್, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಡಾ.ತಿಮ್ಮಪ್ಪ, ಕ್ರೀಡಾ ಪಟು ಎ.ಬಿ.ಸುಬ್ಬಯ್ಯ ಸೇರಿದಂತೆ ಇತರರು ಸಮಿತಿಯ ಭಾಗವಾಗಿದ್ದಾರೆ.

ಸಂಗ್ರಹ ಚಿತ್ರ
'ಕರ್ನಾಟಕ ಸಂಭ್ರಮ-50' ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ ಆಚರಣೆ: ಇಂದು ಹಂಪಿಯಲ್ಲಿ ಜ್ಯೋತಿ ರಥಯಾತ್ರೆಗೆ ಸಿಎಂ ಚಾಲನೆ

ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌ ಮೂಲಕ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಅವಕಾಶ ನೀಡಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ನೇತೃತ್ವದ ಈ ಸಲಹಾ ಸಮಿತಿ‌ ಮುಂದಿನ ವಾರದಿಂದಲೇ ಪರಿಶೀಲನೆ ನಡೆಸಲಿದೆ.

69ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಜಾನಪದ, ಕೃಷಿ, ಪರಿಸರ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ.

ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌ https://sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಈ ಬಾರಿಯೂ ರಾಜ್ಯೋತ್ಸವ ಪ್ರಶಸ್ತಿ ಆಕಾಂಕ್ಷಿಗಳ ಪಟ್ಟಿ ಸಾವಿರದ ಗಡಿ ದಾಟಿದೆ. ಇದುವರೆಗೆ ಸುಮಾರು 1700ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ. ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನದಂದು ಪ್ರಶಸ್ತಿಗಳನ್ನು ಪ್ರದಾನ ಸಮಾರಂಭ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com