
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧ ಸಾಕ್ಷ್ಯ ತಿದ್ದಿದ ಆರೋಪದಡಿ Dysp ಶ್ರೀಧರ್ ಪೂಜಾರಿ ಅನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಬಂದಿದ್ದಾಗ ಶ್ರೀಧರ್ ಪೂಜಾರಿಯನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. DySP ಶ್ರೀಧರ್ ಈ ಹಿಂದೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು. ಈ ಹಗರಣ ಸಂಬಂಧ ಎಸ್ಐಟಿ ರಚನೆ ಬಳಿಕ ಕಾಟನ್ಪೇಟೆ ಠಾಣೆಯಲ್ಲಿ ಶ್ರೀಧರ್ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿತ್ತು. ಕಾಟನ್ಪೇಟೆ ಠಾಣೆಯ ಈ ಪ್ರಕರಣವನ್ನೂ ಸಹ ಎಸ್ಐಟಿ ತನಿಖೆ ನಡೆಸುತ್ತಿದೆ.
Advertisement