ಬೀದರ್: ಬೀದರ್ ಹಾಗೂ ತೆಲಂಗಾಣದ ಗಡಿಯ ಒಂದು ಕಿಲೋ ಮೀಟರ್ ಅಂತರದಲ್ಲಿರುವ ಗಣೇಶಪುರದ ಬಳಿ ಭೀಕರ ಅಪಘಾತ ಸಂಭವಿಸಿದೆ. KSRTC ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರಾಗಿದ್ದಾರೆ. ಬೈಕ್‌ನಲ್ಲಿ ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ. ಗಣೇಶಪುರದ ಸಿದ್ದರಾಮಪ್ಪ (71), ಅವರ ಪುತ್ರಿ ರೇಣುಕಾ (36), ಅಳಿಯ ಜಗನ್ನಾಥ್ (41) ಮತ್ತು ಮೊಮ್ಮಗ ವಿನಯ್ ಕುಮಾರ್ (15) ಮೃತರು. ಅಪಘಾತದ ಬಳಿಕ ಬಸ್ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ
ಸಿದ್ದರಾಮಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಬೀದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಘಟನೆ ಸಂಬಂಧ ಹದ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೂವರ ಮೃತದೇಹವನ್ನ ಬೀದರ್‌ನ ಬ್ರಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Advertisement