
ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ.
ಮೃತ ಬಾಲಕರನ್ನು ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಎಂದು ಗುರುತಿಸಲಾಗಿದೆ.
ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಬಾಲಕರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ಇತ್ತ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement