ಬೆಂಗಳೂರು: ಹಳಸಿದ ಆಹಾರ ಸೇವಿಸಿ 5 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೇ ಆಹಾರ ಸೇವಿಸಿದ ಬಾಲಕನ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.
ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೂವರಿಗೂ ಪದೇ ಪದೇ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಮೂವರು ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರು ಬಾಲಕ ಧೀರಜ್ (5) ಮೃತಟ್ಟಿರುವುದಾಗಿ ತಿಳಿಸಿದ್ದಾರೆ.
ಧೀರಜ್ ತಂದೆ ಬಾಲರಾಜ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದೀಗ ಪೊಲೀಸರು ಬಾಲರಾಜ್ ಅವರ ಮನೆಯಿಂದ ಆಹಾರದ ಮಾದರಿಗಳನ್ನು ಮತ್ತು ಕುಟುಂಬವು ಅಡುಗೆಗೆ ಬಳಸಿದ ಪದಾರ್ಥಗಳನ್ನು ಸಂಗ್ರಹಿಸಿದ್ದು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದ ನಂತರ ತನಿಖೆ ಮುಂದುವರಿಯಲಿದೆ ಪೋಷಕರು ತಿಳಿಸಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ
Advertisement