ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ

ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು
ಪತ್ರಕರ್ತ ಗಣೇಶ್
ಪತ್ರಕರ್ತ ಗಣೇಶ್
Updated on

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್‌ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸದ್ಯ ಟಿವಿ 5 ಚಾನಲ್ ನಲ್ಲಿ ಔಟ್ ಪುಟ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯವರಾಗಿದ್ದ ಗಣೇಶ್‌ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪತ್ರಕರ್ತ ಗಣೇಶ್
ಬೆಂಗಳೂರು ಪ್ರೆಸ್ ಕ್ಲಬ್ ಚುನಾವಣೆ: ಅಧ್ಯಕ್ಷರಾಗಿ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ಳಿತಟ್ಟೆ ಆಯ್ಕೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com