HD ಕುಮಾರಸ್ವಾಮಿ ವಿರುದ್ಧ ADGP ಚಂದ್ರಶೇಖರ್ ದೂರು, NCR ದಾಖಲು!

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಎಂ. ಚಂದ್ರಶೇಖರ್‌ ಭ್ರಷ್ಟ ಅಧಿಕಾರಿಯಾಗಿದ್ದು, ಆತನ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿಯನ್ನು ಕೇಳಿಸಿದೆ.
ಎಂ. ಚಂದ್ರಶೇಖರ್-ಎಚ್ ಡಿ ಕುಮಾರಸ್ವಾಮಿ
ಎಂ. ಚಂದ್ರಶೇಖರ್-ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ಎಡಿಜಿಪಿ ಎಂ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.

ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿ ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್​ ಠಾಣೆಗೆ ಚಂದ್ರಶೇಖರ್ ದೂರು ನೀಡಿದ್ದು, ಚಂದ್ರಶೇಖರ್ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಎಂ. ಚಂದ್ರಶೇಖರ್‌ ಭ್ರಷ್ಟ ಅಧಿಕಾರಿಯಾಗಿದ್ದು, ಆತನ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿಯನ್ನು ಕೇಳಿಸಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿದ ಎಚ್.ಡಿ ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದರು.

ಎಂ. ಚಂದ್ರಶೇಖರ್-ಎಚ್ ಡಿ ಕುಮಾರಸ್ವಾಮಿ
ಹಂದಿ ವಿವಾದ: 'ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ': JDS ಸರಣಿ ಆರೋಪ

ಇದಕ್ಕೆ ತಿರುಗೇಟು ನೀಡಿದ್ದ ಎಂ. ಚಂದ್ರಶೇಖರ್, ಹಂದಿಗಳ ಎಂದಿಗೂ ಕುಸ್ತಿಯಾಡಬೇಡಿ. ನೀವಿಬ್ಬರೂ ಕೊಳಕಾಗುತ್ತೀರಿ ಮತ್ತು ಹಂದಿಯು ಅದನ್ನು ಇಷ್ಟಪಡುತ್ತದೆ. ಹೀಗೆ ಇಂಗ್ಲೀಷ್ ದಾರ್ಶನಿಕ ಜಾರ್ಜ್ ಬರ್ನಾರ್ಡ್ ಷಾ ಅವರ ಪದಗಳನ್ನು ಉಲ್ಲೇಖಿಸಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅಂದಿನಿಂದ ಕುಮಾಸ್ವಾಮಿ ಮತ್ತು ಚಂದ್ರಶೇಖರ್ ವಿರುದ್ಧ ಜಟಾಪಟಿ ಶುರುವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com